ಸೋಮವಾರ ರಾಜ್ಯದಲ್ಲಿ ಏನೇನು ಇರುತ್ತದೆ ಇರೊದಿಲ್ಲ ಕಂಪ್ಲೀಟ್ ಮಾಹಿತಿ…..

Suddi Sante Desk

ಬೆಂಗಳೂರು –

ರಾಜ್ಯದಲ್ಲಿ ಪಾಸಿಟಿವಿಟಿ ದರ ಕಡಿಮೆಯಾದ ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದ್ದು ಇನ್ನೂ ಕಡಿಮೆಯಾಗದ ಜಿಲ್ಲೆಗಳಲ್ಲಿ ಯಥಾಸ್ಥಿತಿ ಮುಂದುವರಿಕೆ ಮಾಡಲಾಗಿದೆ ಎಂದು ಮುಖ್ಯ ಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ ಬೆಂಗಳೂರಿ ನಲ್ಲಿ ಮಾತನಾಡಿದ ಅವರು ಕಳೆದ ಒಂದು ವಾರದ ಲ್ಲಿ ಅನೇಕ ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಕಡಿಮೆ ಯಾಗಿದ್ದು ಇದರ ಆಧಾರದ ಮೇಲೆ ನಿರ್ಬಂಧ ಸಡಿಲಿಕೆ ಮಾಡಲಾಗಿದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು

ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕ ಬಳ್ಳಾಪುರ, ತುಮಕೂರು,ಕೋಲಾರ, ಬೆಂಗಳೂರು, ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ, ಬೀದರ್ ಜಿಲ್ಲೆ ಗಳಿಗೆ ಸಡಿಲಿಕೆ ಮಾಡಲು ತೀರ್ಮಾನಿಸಲಾಗಿದೆ ಎಂದರು

ಏನಿರುತ್ತೆ? ಇರಲ್ಲ?

ಎಲ್ಲಾ ಅಂಗಡಿಗಳನ್ನು ಬೆಳಗ್ಗೆಯಿಂದ ಸಂಜೆ 5 ಗಂಟೆವರೆಗೆ ತೆರೆಯಲು ಅವಕಾಶ

ಎಸಿ ಚಾಲನೆ ಇಲ್ಲದೇ ಹೋಟೆಲ್,ಕ್ಲಬ್, ರೆಸ್ಟೊ ರೆಂಟ್ ಓಪನ್,ಮದ್ಯಪಾನ ಹೊರತುಪಡಿಸಿ ಶೇಕಡ 50 ಸಾಮರ್ಥ್ಯದೊಂದಿಗೆ ಕುಳಿತು ಊಟ ಮಾಡಲು ಅವಕಾಶ

ಹೊರಾಂಗಣ ಚಿತ್ರೀಕರಣಕ್ಕೆ ಅನುಮತಿ

ಬಸ್, ಮೆಟ್ರೋ ಸಂಚಾರಕ್ಕೆ ಅವಕಾಶ

ವೀಕ್ಷಕರಿಲ್ಲದೇ ಹೊರಾಂಗಣ ಕ್ರೀಡೆ

ಸರ್ಕಾರಿ, ಖಾಸಗಿ ಕಚೇರಿ ಶೇಕಡ 50 ರಷ್ಟು ಸಿಬ್ಬಂದಿ ಮಾತ್ರ ಕಾರ್ಯ ನಿರ್ವಹಣೆ

ಲಾಡ್ಜ್, ರೆಸಾರ್ಟ್ ಗಳಲ್ಲಿ ಶೇಕಡ 50 ಸಾಮರ್ಥ್ಯಕ್ಕೆ ಅವಕಾಶ

ಜಿಮ್ ಗಳಲ್ಲಿ ಎಸಿ ಇಲ್ಲದೇ ಶೇಕಡ 50 ಸಾಮರ್ಥ್ಯ ಕ್ಕೆ ಅವಕಾಶ ನೀಡಲಾಗಿದೆ

ಶೇಕಡ 5 ಕ್ಕಿಂತ ಪಾಸಿಟಿವಿಟಿ ದರ ಜಾಸ್ತಿ ಇರುವ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಬಳ್ಳಾಪುರ,ಚಿಕ್ಕಮಗಳೂರು, ಚಾಮರಾಜ ನಗರ,ದಾವಣಗೆರೆ, ಕೊಡಗು, ಧಾರವಾಡ, ಬಳ್ಳಾರಿ, ವಿಜಯಪುರ ಜಿಲ್ಲೆಗಳಲ್ಲಿ 11 -6 – 2021 ರ ಆದೇಶದ ಸಡಿಲಿಕೆಯ ನಿರ್ಬಂಧ ದ ಆದೇಶವನ್ನು ಮುಂದುವರೆಯಲಿದೆ ಎಂದರು

ಶೇಕಡ 10 ಕ್ಕಿಂತ ಹೆಚ್ಚು ಪಾಸಿಟಿವ್ ಇರುವ ಮೈಸೂರಿಲ್ಲಿ ನಿರ್ಬಂಧ ಯಥಾಸ್ಥಿತಿ ಇರಲಿದೆ.

ಸಂಜೆ 7 ರಿಂದ ಬೆಳಗ್ಗೆ 5 ಗಂಟೆವರೆಗೆ ನೈಟ್ ಕರ್ಫ್ಯೂ

ವಾರಾಂತ್ಯ ಕರ್ಫ್ಯೂ – ಶುಕ್ರವಾರದಿಂದ ಸಂಜೆ 7 ರಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ವೀಕೆಂಡ್ ಕರ್ಫ್ಯೂ

ಶೇಕಡ 50 ಮಿತಿಯೊಂದಿಗೆ ಬಸ್ ಸಂಚಾರಕ್ಕೆ ಅವಕಾಶ

ನಿರ್ಬಂಧ:

ಈಜುಕೊಳ,ಸಭೆ ಸಮಾರಂಭ, ರಾಜಕೀಯ ಸಭೆ, ಕ್ರೀಡೆ, ಶಿಕ್ಷಣ ಸಂಸ್ಥೆ, ಸಿನಿಮಾ ಮಂದಿರ, ಶಾಪಿಂಗ್ ಮಾಲ್, ಪಬ್, ಅಮ್ಯೂಸ್ ಮೆಂಟ್ ಪಾರ್ಕ್

16 ಜಿಲ್ಲೆಗಳಲ್ಲಿ ಶೇ.5ಕ್ಕಿಂತ ಕಡಿಮೆ ಪಾಸಿಟಿವ್ ದರ ಇದೆ.

13 ಜಿಲ್ಲೆಗಳಲ್ಲಿ 5-10 ಇದೆ. ಮೈಸೂರು ಜಿಲ್ಲೆಯಲ್ಲಿ 10 ಕ್ಕಿಂತ ಹೆಚ್ಚು ಇದೆ. ಈ ಪಾಸಿಟಿವಿಟಿ ದರದ ಆಧಾರದ ಮೇಲೆ ನಿರ್ಭಂಧಗಳ ಸಡಿಲಿಕೆಯ ಆಧಾರ ಮೇಲೆ, ಶೇ.5 ಕ್ಕಿಂತ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ ಸೇರಿದಂತೆ ಗದಗ, ರಾಯಚೂರು, ಬಾಗಲಕೋಟೆ, ಕಲಬುರ್ಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಈ ಕೆಳಕಂಡಂತೆ ಸಡಿಲಿಕೆ ಮಾಡಲು ತೀರ್ಮಾನಿಸಲಾಗಿದೆ ಎಂದರು

ಎಲ್ಲಾ ಅಂಗಡಿಗಳನ್ನು ಬೆಳಿಗ್ಗೆ 6 ರಿಂದ ಸಂಜೆ 5 ಗಂಟೆಯವರೆಗೆ ತೆರೆಯೋದಕ್ಕೆ ಅವಕಾಶ ನೀಡಲಾ ಗಿದೆ. ಎಸಿ ಚಾಲನೆಗೊಳಿಸದೇ ಹೋಟೆಲ್, ಕ್ಲಬ್, ರೆಸ್ಟೋರೆಂಟ್ ಗಳಲ್ಲಿ ಮಧ್ಯಪಾನ ಹೊರತುಪಡಿಸಿ ಸಂಜೆ 5 ಗಂಟೆಯವರೆಗೆ ಶೇ.50ರಷ್ಟು ಜನರನ್ನು ಒಳಗೊಂಡು ತೆರೆಯೋದಕ್ಕೆ ಅವಕಾಶ ನೀಡಲಾ ಗಿದೆ.ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶವನ್ನು ನೀಡಲಾಗಿದೆ. ಬಸ್ ಮತ್ತು ಮೆಟ್ರೋಗೆ ಶೇ.50ರಷ್ಟು ಜನರೊಂದಿಗೆ ಕಾರ್ಯಾಚರಣೆಗೆ ಅವಕಾಶ ನೀಡ ಲಾಗಿದೆ.ಸರ್ಕಾರಿ, ಖಾಸಗಿ ಕಚೇರಿಗಳಲ್ಲಿ ಶೇ.50 ರಷ್ಟು ನೌಕರರೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ. ಲಾಡ್ಜ್, ರೆಸಾರ್ಟ್ ಶೇ.50ರಷ್ಟು ಜನರೊಂದಿಗೆ ತೆರೆಯಲು ಅವಕಾಶ ನೀಡಲಾಗಿದೆ. ಜಿಮ್ ಗಳಲ್ಲಿ ಹವಾನಿಯಂತ್ರಣ ಇಲ್ಲದೇ ಅವಕಾಶ ನೀಡಲಾಗಿದೆ.

ಶೇ.5ಕ್ಕಿಂತ ಹೆಚ್ಚು ಪಾಸಿಟಿವಿಟಿ ಇರುವಂತ 13 ಜಿಲ್ಲೆಗಳಾದಂತ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ,ದಾವಣಗೆರೆ ಧಾರವಾಡ, ಕೊಡಗು ಬಳ್ಳಾರಿ, ಚಿತ್ರದುರ್ಗ, ವಿಜಯಪುರ ಜಿಲ್ಲೆಗಳಲ್ಲಿ ದಿನಾಂಕ 11-06-2021ರ ಆದೇಶವೇ ಮುಂದುವರೆಯಲಿದೆ ಎಂದು ತಿಳಿಸಿದರು.

ಶೇ.10 ಕ್ಕಿಂತ ಹೆಚ್ಚಿರುವಂತ ಮೈಸೂರು ಜಿಲ್ಲೆಯಲ್ಲಿ ಈಗ ಇರುವಂತ ನಿಬಂಧನೆಗಳ ಯಥಾಸ್ಥಿತಿ ಮುಂದುವರೆಯಲಿದೆ. ರಾಜ್ಯಾಧ್ಯಂತ ನೈಟ್ ಕರ್ಪ್ಯೂ,ವಾರಾಂತ್ಯ ಕರ್ಪ್ಯೂ ಹಾಗೆಯೇ ಮುಂದುವ ರೆಯಲಿದೆ. ಬಸ್ ಸಂಚಾರ ಶೇ.50ರಷ್ಟು ಪ್ರಯಾಣಿ ಕರಿಗೆ ಮಿತಿಗೊಳಿಸಿ,ಸಂಚಾರಕ್ಕೆ ಅನುಮತಿ ನೀಡ ಲಾಗಿದೆ.ಇಡೀ ರಾಜ್ಯದಲ್ಲಿ ಈಜುಕೊಳ, ಸಭೆ ಸಮಾರಂಭ, ಪೂಜಾ ಸ್ಥಳ, ಶಾಫಿಂಗ್ ಮಾಲ್, ಅಮ್ಯೂಸ್ ಮೆಂಟ್ ಪಾರ್ಕ್, ಪಬ್ ತೆರೆಯೋದಕ್ಕೆ ನಿರ್ಬಂಧಿಸಲಾಗಿದೆ.ಈ ಆದೇಶವು ಜುಲೈ 5ರವರೆಗೆ ಜಾರಿಯಲ್ಲಿರಲಿದ್ದು ಅಲ್ಲಿಯವರೆಗೆ ವಾರಾಂತ್ಯ ಹಾಗೂ ನೈಟ್ ಕರ್ಪ್ಯೂ ಮುಂದುವರೆಸಲಾಗಿದೆ ಎಂಬುದಾಗಿ ಯಡಿಯೂರಪ್ಪ ಹೇಳಿದರು

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.