ಗೋಕಾಕ್ –
ಸೆಕ್ಸ್ ಸಿಡಿ ಪ್ರಕರಣ ಕುರಿತು ಅತ್ತ ಬೆಂಗಳೂರಿನಲ್ಲಿ ತನಿಖೆ ತೀವ್ರಗೊಂಡರೆ ಇತ್ತ ರಮೇಶ್ ಜಾರಕಿಹೊಳಿ ತವರಿನಲ್ಲಿ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಬೆಂಬಲಿಗರು ಗೋಕಾಕ್ ನಲ್ಲಿ ಬಸ್ ಸಂಚಾರ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ರಮೇಶ್ ಜಾರಕಿಹೊಳಿ ಬೆಂಬಲಿಗರು ಗೋಕಾಕ್ ನಗರದಲ್ಲಿ ಬಸ್ ಸಂಚಾರ ಸ್ಥಗಿತಗೊಳಿಸಿ ಭಾರೀ ಪ್ರತಿಭಟನೆ ನಡೆಸುತ್ತಿದ್ದು, ಗೋಕಾಕ್ ನಲ್ಲಿ ಕಾಲೇಜುಗಳನ್ನು ಸಹ ಬಂದ್ ಮಾಡಲಾಗಿದೆ. ದಿಢೀರ್ ಬಸ್ ಸಂಚಾರದಿಂದ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಬಸ್ ಸಂಚಾರವಿಲ್ಲದೇ ಜನರು ನಡೆದುಕೊಂಡೇ ಊರುಗಳಿಗೆ ತೆರಳುತ್ತಿದ್ದಾರೆ.

ರಮೇಶ್ ಜಾರಕಿಹೊಳಿ ಏಳಿಗೆ ಯನ್ನು ಸಹಿಸ ದವರು ಸಿಡಿ ಪ್ರಕರಣದಲ್ಲಿ ಸಿಕ್ಕಿಹಾಕಿಸಲಾಗಿದೆ. ಸಿಡಿ ಬಿಡುಗಡೆ ಮಾಡಿದ ದಿನೇಶ್ ಕಲ್ಲಳ್ಳಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಘೋಷಣೆಗಳನ್ನು ಕೂಗಿದರು.
