ಶಿಕ್ಷಣ ಸಚಿವರ ಆಪ್ತ ಕರೋನ ಗೆ ಬಲಿ – ದೊಡ್ಡವರು ಪರಿಸ್ಥಿತಿ ಹೀಗೆ ಆದರೆ ಇನ್ನೂ ಜನಸಾಮಾನ್ಯರ…..

Suddi Sante Desk

ಬೆಂಗಳೂರು –

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ ಕಮಾರ್‌ ಅವರ ಆಪ್ತ ಸಹಾಯಕ ಎಚ್‌. ಜೆ. ರಮೇಶ್‌ ಅವರು ಕೋವಿಡ್‌ಗೆ ಸೋಮವಾರ ಬೆಳಿಗ್ಗೆ ಬಲಿಯಾಗಿದ್ದಾರೆ.ರಮೇಶ್‌ ಅವರಿಗೆ ಏ. 13ರಂದು ಕೋವಿಡ್‌ ದೃಢಪಟ್ಟಿತ್ತು.ಅವರನ್ನು ಸೇಂಟ್‌ ಜಾನ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಸಿರಾಟ ಸಮಸ್ಯೆ ಕಾಣಿಸಿಕೊಂಡ ಕಾರಣ ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ರಮೇಶ್‌ ಅವರು ಸಚಿವರ ಮನೆಯಲ್ಲಿ ಕಳೆದ ಎಂಟು ವರುಷಗಳಿಂದ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು.ಉಸಿರಾಟ ಸಮಸ್ಯೆ ಎದುರಾದಾಗ, ತಕ್ಷಣ ಅಗತ್ಯ ಪ್ರಮಾಣದಲ್ಲಿ ಆಕ್ಸಿಜನ್‌ ಸಿಗಲಿಲ್ಲ. ಆಕ್ಸಿಜನ್‌ ಕೊರತೆಯಿಂದ ಸಾವು ಸಂಭವಿಸಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ‌.

ರಮೇಶ್‌ ಸಾವಿನ ಬಗ್ಗೆ ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಸುರೇಶ್‌ಕುಮಾರ್‌, ‘ನಮ್ಮ ಕ್ಷೇತ್ರದ (ರಾಜಾಜಿನಗರ) ಅನೇಕರನ್ನು ವಿವಿಧ ಆಸ್ಪತ್ರೆಗಳಿಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ ಉಳಿಸಿ ದ್ದ, ನನ್ನ ಆಪ್ತ ಸಹಾಯಕ ಎಚ್‌.ಜೆ. ರಮೇಶ್ ಇನ್ನಿಲ್ಲ. ರಮೇಶ್ ಸುಮಾರು ಎಂಟು ವರ್ಷ ನನ್ನೊಡನೆ ನಗು ನಗುತ್ತಾ ಸೇವೆ ಸಲ್ಲಿಸಿದ್ದರು. ಅವರ ಆತ್ಮಕ್ಕೆ ಸದ್ಗತಿ ದೊರಕಲಿ’ಎಂದಿದ್ದಾರೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.