This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

ಬಾಗಲಕೋಟೆ

ಜಾತಿಗಣತಿ ವರದಿ ಕುರಿತು CM ಖಡಕ್ ಮಾತು – ವರದಿ ವಿರೋಧ ಮಾಡುವವರಿಗೆ ಮುಖ್ಯಮಂತ್ರಿ ಹೇಳಿದ್ದೇನು ಗೊತ್ತಾ…..

WhatsApp Group Join Now
Telegram Group Join Now

ಬಾಗಲಕೋಟೆ

ಜಾತಿ ಜನಗಣತಿ ಬೇಡ ಎನ್ನುವವರಿಗೂ ಅದರಲ್ಲೇನಿದೆ ಎಂದು ತಿಳಿದಿಲ್ಲ ಊಹೆಗಳ ಮೇಲೆ ಮತನಾಡುವುದು ಒಳ್ಳೆಯ ಬೆಳವಣಿ ಗೆಯಲ್ಲ CM ಸಿದ್ದರಾಮಯ್ಯ ಹೌದು

ಜಾತಿ ಜನಗಣತಿ ವರದಿ ಸಲ್ಲಿಸುವ ಮುನ್ನವೇ ಚರ್ಚೆ ಶುರುವಾಗಿದೆ. ವರದಿಯಲ್ಲೇ ಏನಿದೆ ಎಂದು ಅದನ್ನು ಬೇಡ ಎನ್ನುವವರಿಗೂ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಬಾಗಲಕೋಟೆಯ ನವನಗರದ ಹೆಲಿಪ್ಯಾಡಿನಲ್ಲಿ ಮಾತನಾಡಿದ ಅವರು ವರದಿ ಸಲ್ಲಿಕೆಯಾದ ನಂತರ ನೋಡೋಣ.ಸುಮ್ಮನೆ ಊಹೆಗಳ ಮೇಲೆ ಮಾತನಾಡುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದರು.

ಕರೆದು ಮಾತನಾಡುವೆ
ಮೂಲ ವರದಿ ಕಳೆದಿದೆ ಎಂದು ಹಾಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಯಪ್ರಕಾಶ್ ಹೇಳಿಕೆ ಬಗ್ಗೆ ಮಾತನಾಡಿ, ಅವರನ್ನು ಕರೆದು ಮಾತನಾಡುತ್ತೇನೆ ಎಂದರು. ಇನ್ನೂ ಹೇಳಿಕೆ ನೀಡುವಾಗ ಸತ್ಯಾಂಶವನ್ನು ಆಧಾರಿಸಿರಬೇಕೆಂದರು.

ಜಾತಿ ಜನಗಣತಿ ಸಮಾಜವನ್ನು ಒಡೆಯುತ್ತದೆ ಎಂದಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಅವರಿಗೆ ವರದಿಯಲ್ಲಿ ಏನಿದೆ ಎಂದು ಗೊತ್ತಿದೆಯೇ ಎಂದರು.

ಯಾರೇ ಆಗಲಿ ಗೊತ್ತಿಲ್ಲದೆ ಮಾತನಾಡ ಬಾರದು. ಸಮಾಜ ಏಕೆ ಒಡೆಯುತ್ತೇವೆ  ಎಂದು ಪ್ರಶ್ನಿಸಿ ದರು.ನಿತೀಶ್ ಕುಮಾರ್ ಬಿಹಾರದಲ್ಲಿ ಜಾತಿ ಗಣತಿ ಸ್ವೀಕರಿಸಿದ್ದಾರೆ. ಸಮಾಜ ಒಡೆದುಬಿಟ್ಟರೆ ಎಂದರು.ಯಾವುದೇ ಹೇಳಿಕೆ ನೀಡುವಾಗ ಅದು ಸತ್ಯಾಂಶದ ಮೇಲೆ ಅವಲಂಬಿತವಾಗಿರಬೇಕು ಎಂದರು.

ಬಿಜೆಪಿಯಲ್ಲಿ ಬೆಂಕಿ ಹತ್ತಿಕೊಂಡಿದೆ.ಅರವಿಂದ್ ಲಿಂಬಾವಳಿ ಯವರು ವಿರೋಧ ಪಕ್ಷದ ನಾಯಕನ ಆಯ್ಕೆ ಹಾಗೂ ಪಕ್ಷದ ಅಧ್ಯಕ್ಷ ರ ಆಯ್ಕೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಮಾತನಾಡಿ ವಿ.ಸೋಮಣ್ಣ 6 ನೇ ತಾರೀಖಿನ ನಂತರ ತಮ್ಮ ಅನಿಸಿಕೆ ತಿಳಿಸುವ ಬಗ್ಗೆ ಮಾತ ನಾಡಿ ಬಿಜೆಪಿ ಪಕ್ಷದಲ್ಲಿ ವಿಜಯೇಂದ್ರನವರನ್ನು ಅಧ್ಯಕ್ಷರನ್ನಾಗಿ ಹಾಗೂ ಆರ್.ಅಶೋಕ್ ಅವರನ್ನು ವಿರೋಧ ಪಕ್ಷದ ನಾಯಕನನ್ನಾಗಿ ನೇಮಿಸಿದ ಮೇಲೆ ಬೆಂಕಿ ಹತ್ತಿಕೊಂಡಿದೆ.

ಬಹಳಷ್ಟು ಜನರಿಗೆ ಅಸಮಾಧಾನವಾಗಿದೆ. ಇದು ಏನಾಗುತ್ತದೆ ಎಂದು ಗೊತ್ತಿಲ್ಲ.ಅದು ಜ್ವಾಲೆಯಾ ಗುತ್ತದೆಯೋ ಅವರ ಬುಡಕ್ಕೆ ಬೆಂಕಿ ಹತ್ತುಕೊಳ್ಳು ತ್ತದೆಯೋ ಗೊತ್ತಿಲ್ಲ. ಬೆಂಕಿ ಅಂತೂ ಹತ್ತಿಕೊಂಡಿದೆ ಎಂದರು.ಪಕ್ಷಕ್ಕೆ ಸೇರ್ಪಡೆಯಾಗುವವರು ನಮ್ಮ ಸಿದ್ಧಾಂತಕ್ಕೆ ಬದ್ಧರಾಗಿರಬೇಕೆಂದರು.

ನಾವು ಯಾರನ್ನೂ ಕಾಂಗ್ರೆಸ್ ಗೆ ಕರೆಯೋಲ್ಲ ಅವರಾಗಿಯೇ ಬಂದರೆ ಸೇರಿಸಿಕೊಳ್ಳುತ್ತೇವೆ. ನಾನು ಯಾರನ್ನೂ ಸಂಪರ್ಕಿಸಿಲ್ಲ ಯಾರು ನಮ್ಮ ನಾಯಕತ್ವವನ್ನು ಒಪ್ಪಿಕೊಂಡು ಅವರಾಗಿಯೇ ಬರುತ್ತಾರೋ ಅವರನ್ನು ಸೇರಿಸಿಕೊಂಡಿದ್ದೇವೆ.

ನನ್ನ ರಾಜಕೀಯ ಜೀವನದಲ್ಲಿ ಯಾರನ್ನೂ ಬನ್ನಿ ಎಂದು ಕರೆಯಲು ಹೋಗಿಲ್ಲ.ನಮ್ಮ ಸಿದ್ಧಾಂತಕ್ಕೆ ಬದ್ಧರಾಗಿರಬೇಕಲ್ಲ.ಬಿಜೆಪಿ ಯಲ್ಲಿ ಬಹಳ ವರ್ಷ ಇದ್ದವರು ಆ ಸಿದ್ಧಾಂತ ವನ್ನು ಒಪ್ಪಿರುತ್ತಾರೆ. ಅದನ್ನು ಬಿಟ್ಟು ಕಾಂಗ್ರೆಸ್ ಸಿದ್ಧಾಂತ ಒಪ್ಪಿಕೊಳ್ಳ ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸುದ್ದಿ ಸಂತೆ ನ್ಯೂಸ್ ಬಾಗಲಕೋಟೆ…..


Google News

 

 

WhatsApp Group Join Now
Telegram Group Join Now
Suddi Sante Desk