ಬೆಂಗಳೂರು –
ಹೌದು ಹಿಜಾಬ್ ವಿಚಾರದಲ್ಲಿ ಮಹತ್ವದ ತೀರ್ಪು ನೀಡಿದ ಕರ್ನಾಟಕದ ಹೈಕೋರ್ಟ್ ನ ನ್ಯಾಯಮೂರ್ತಿಗಳಿಗೆ ಬೆದರಿಕೆ ನೀಡಲಾಗಿದೆ.ಹೌದು ತಮಿಳುನಾಡಿನ ತೌಹೀದ್ ಜಮಾತ್ ನಿಂದ ಬೆದರಿಕೆ ಆರೋಪ ಕೇಳಿಬಂದಿದೆ.ಇದೀಗ ತೌಹೀದ್ ಜಮಾತ್ ಸಂಘಟನೆಯ ರೆಹಮತುಲ್ಲಾ ವಿರುದ್ಧ ಕ್ರಮ ಕೋರಿ ಅರ್ಜಿ ಸಲ್ಲಿಸಲಾಗಿದೆ. ಗಿರೀಶ್ ಭಾರದ್ವಾಜ್ ಎಂಬುವರಿಂದ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ರಿಗೆ ಅರ್ಜಿ ಸಲ್ಲಿಸಲಾಗಿದೆ.ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಲು ಮನವಿ ಮಾಡಲಾಗಿದೆ.ಈ ಮಧ್ಯೆ ಪಿಎಫ್‌ಐ ಮತ್ತು ನಟ ಚೇತನ್ ವಿರುದ್ಧವೂ ಕ್ರಮಕ್ಕೆ ಮನವಿ ಮಾಡಿ ದ್ದಾರೆ. ಗಮನಾರ್ಹವೆಂದರೆ ಹಿಜಾಬ್ ತೀರ್ಪು ನೀಡಿದ ಕರ್ನಾಟಕದ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ತೀರ್ಪು ನೀಡುವ ಸಂದರ್ಭದಲ್ಲಿ ಬೆಂಗಳೂರು ಪೊಲೀಸರು ಅವರ ನಿವಾಸಕ್ಕೆ ಹೆಚ್ಚಿನ ಭದ್ರತೆ ಕಲ್ಪಿಸಿದ್ದಾರೆ.

ಹೈಕೋರ್ಟ್ ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ನ್ಯಾ.ಖಾಜಿ ಜೈಬುನ್ನೀಸಾ ಮೊಹಿಯು ದ್ದೀನ್ ಅವರ ಪೂರ್ಣ ಪೀಠ ಹಿಜಾಬ್ ತೀರ್ಪು ನೀಡಿದೆ. ಸಮವಸ್ತ್ರ ನಿಗದಿಪಡಿಸುವ ಅಧಿಕಾರ ಶಾಲೆಗಳಿಗಿದೆ. ಹಿಜಾಬ್ ಧಾರಣೆ ಕಡ್ಡಾಯವಲ್ಲ.ಈ ಸಂಬಂಧ ರಾಜ್ಯ ಸರ್ಕಾರದ ಆದೇಶ ಕಾನೂನುಬದ್ಧವಾಗಿದೆ.ಉಡುಪಿ ಕಾಲೇಜಿಗೆ ನಿರ್ದೇಶನ ಹೇರುವ ಅಗತ್ಯವಿಲ್ಲ ಅಂತ ಕೋರ್ಟ್ ತನ್ನತೀರ್ಪಿನಲ್ಲಿ ತಿಳಿಸಿದೆ.ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಹಿಜಾಬ್ ಇಸ್ಲಾಂ ಧರ್ಮದ ಅವಿಭಾಜ್ಯ ಭಾಗವಲ್ಲ ಎಂದು ತೀರ್ಪು ನೀಡಿದೆ.ಈ ತೀರ್ಪು ಪ್ರಶ್ನಿಸಿ ನಿಬಾ ನಾಜ್ ಎಂಬ ವಿದ್ಯಾರ್ಥಿ ನಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.


ಅದೇ ವೇಳೆ ಹಿಂದೂ ಸೇನಾದ ಅಧ್ಯಕ್ಷ ಸುರ್ಜಿತ್ ಯಾದವ್ ಅವರು ಸುಪ್ರೀಂಕೋರ್ಟ್‌ನಲ್ಲಿ ಕೇವಿಯಟ್ ಅರ್ಜಿ ಸಲ್ಲಿಸಿದ್ದಾರೆ.ಉಚ್ಚ ನ್ಯಾಯಾಲಯವು ಯಾವುದೇ ಆದೇಶವನ್ನು ನೀಡುವ ಮೊದಲು ತನ್ನ ಮನವಿಯನ್ನು ಆಲಿಸಬೇಕು ಎಂದು ಹಿಂದೂ ಸೇನಾ ಹೇಳಿದೆ.ಹಿಂದೂ ಸೇನೆಯ ಉಪಾಧ್ಯಕ್ಷ ಸುರ್ಜಿತ್ ಸಿಂಗ್ ಯಾದವ್ ಅವರು ವಕೀಲ ಅರುಣ್ ಸಿನ್ಹಾ ಮೂಲಕ ಈ ಕೇವಿಯಟ್ ಸಲ್ಲಿಸಿ ದ್ದಾರೆ.ಕರ್ನಾಟಕ ಹೈಕೋರ್ಟ್ ಪೂರ್ಣ ಪೀಠ ಮಹತ್ವದ ತೀರ್ಪು ನೀಡಿದೆ.ಪ್ರತಿ ಪುಟಕ್ಕೂ ಸಹಿ ಹಾಕಿ ಹೇಳಿಕೆ ನೀಡಿದ ಮುಖ್ಯ ನ್ಯಾಯಮೂರ್ತಿ ಸಿಜೆ ರಿತುರಾಜ್ ಅವಸ್ತಿ ಕೆಲವು ಪ್ರಶ್ನೆಗಳನ್ನು ರಚಿಸಿದ್ದೇವೆ.ಅವುಗಳಿಗೆ ಉತ್ತರವನ್ನೂ ನೀಡಿ ದ್ದೇವೆ. ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ. ಸಮವಸ್ತ್ರ ನಿಗದಿಪಡಿಸುವುದು ಸೂಕ್ತವಾದ ನಿರ್ಬಂಧನೆ. ಸರ್ಕಾರದ ಆದೇಶ ಕಾನೂನುಬದ್ದವಾಗಿದೆ ಎಂದಿದ್ದಾರೆ ಉಡುಪಿಯಿಂದ ಶುರುವಾಗಿದ್ದ ಹಿಜಾಬ್ ಗಲಾಟೆ ಇಡೀ ವಿಶ್ವಕ್ಕೆ ವ್ಯಾಪಿಸಿತ್ತು.ಮುಸ್ಲಿಂ ಸಮುದಾಯದ ಕೆಲ ವಿದ್ಯಾರ್ಥಿನಿಯರು ಹಿಜಾಬ್ ನಮ್ಮ ಹಕ್ಕು ನಾವು ಧರಿಸಿ ಯೇ ಶಾಲೆ- ಕಾಲೇಜಿಗೆ ಬರುತ್ತೇವೆ ಎಂದು ಪ್ರತಿಭಟನೆ ನಡೆಸಿದ್ದರು.ಜೊತೆಗೆ ಹಿಜಾಬ್ ಧರಿಸುವವರೆಗೆ ಕೇಸರಿ ಶಾಲು ಧರಿಸುತ್ತೇವೆ ಅಂತ ಹಲವು ಹಿಂದೂ ವಿದ್ಯಾರ್ಥಿ ಗಳು ಪಟ್ಟು ಬಿದ್ದಿದ್ದರು