ದಾವಣಗೆರೆ –
OPS ಮರು ಜಾರಿಗೆ ರಾಜ್ಯ ಸರ್ಕಾರಕ್ಕೆ ಗಡುವು ನೀಡಿದ NPS ನೌಕರರು – ವಿಶೇಷ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡರು ಮೂರು ಪ್ರಮುಖ ನಿರ್ಣಯ ಹೌದು
ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (ಎನ್‌ಪಿಎಸ್) ರದ್ದು ಮಾಡಿ, ಹಳೇ ಪಿಂಚಣಿ ವ್ಯವಸ್ಥೆ (ಒಪಿಎಸ್) ಮರು ಜಾರಿಗೊಳಿಸಲು ಒತ್ತಾಯಿಸಿ ರಾಜ್ಯ ಸರ್ಕಾರಕ್ಕೆ ಗಡುವು ನೀಡಿ, ಅದಕ್ಕೂ ಸರ್ಕಾರ ಸ್ಪಂದಿಸದಿದ್ದರೆ ಜನವರಿ 15ರಿಂದ ಉಗ್ರ ಹೋರಾಟ ನಡೆಸಲು ‘ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ’ ತೀರ್ಮಾನಿಸಿದೆ
ನಗರದಲ್ಲಿ ಭಾನುವಾರ ನಡೆದ ಸಂಘದ ವಿಶೇಷ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಈ ನಿರ್ಣಯವೂ ಸೇರಿ ದಂತೆ ಒಟ್ಟು ಮೂರು ನಿರ್ಣಯ ಕೈಗೊಳ್ಳಲಾಯಿತು ಎನ್‌ಪಿಎಸ್ ಬದಲಿಗೆ ಒಪಿಎಸ್ ಜಾರಿಯ ಸಾಧ್ಯತೆಗಳ ಕುರಿತು ಪರಿಶೀಲಿಸಲು ರಾಜ್ಯ ಸರ್ಕಾರ ಸಮಿತಿ ರಚಿಸಿ ರುವುದು ಸಮಯವನ್ನು ಹಾಳು ಮಾಡುತ್ತ ಮುಂದೂ ಡುವ ತಂತ್ರಗಾರಿಕೆಯಾಗಿದೆ. ಹೀಗಾಗಿ ಸಮಿತಿಯನ್ನು ವಿರೋಧಿಸುವುದು ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮತದಾರರ ಪಟ್ಟಿಯಿಂದ ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಹೆಸರುಗಳನ್ನು ಕೈ ಬಿಟ್ಟಿರುವುದನ್ನು ವಿರೋಧಿಸುವ ನಿರ್ಣಯವೂ ಇದರಲ್ಲಿ ಸೇರಿದೆ.
ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಶಾಂತಾರಾಮ ತೇಜ್ ಅವರು ಸಭೆಯಲ್ಲಿ ಕೈಗೊಂಡ ನಿರ್ಣಯಗಳನ್ನು ಪಠಿಸಿದರು.ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮತದಾರರ ಪಟ್ಟಿಯಿಂದ ಎನ್‌ಪಿಎಸ್ ನೌಕರರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಹೆಸರನ್ನು ಕೈಬಿಟ್ಟಿರುವುದು ಸಂಘಟನೆಯನ್ನು ಹತ್ತಿಕ್ಕುವ ಕ್ರಮವಾಗಿದೆ.
ಇದು ಚುನಾವಣಾ ತಂತ್ರವಾಗಿದ್ದು, ಅದಕ್ಕೆ ಬೆದರು ವುದಿಲ್ಲ’ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಸಿದ್ದಪ್ಪ ಸಂಗಣ್ಣನವರ ಹೇಳಿದರು.ರಾಜ್ಯ ಘಟಕದ ಪ್ರಮುಖರು ಸೇರಿದಂತೆ ವಿವಿಧ ಜಿಲ್ಲೆಗಳ ಪದಾಧಿ ಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು
ಸುದ್ದಿ ಸಂತೆ ನ್ಯೂಸ್ ದಾವಣಗೆರೆ…..