ತುಮಕೂರು –
ಮೂವರು ಪೊಲೀಸ್ ಪೇದೆ ಗಳನ್ನು ಅಮಾನತು ಮಾಡಿದ ಘಟನೆ ತುಮಕೂರಿನಲ್ಲಿ ನಡೆದಿದೆ ಹೌದು ಅಪರಾಧ ಪ್ರಕರಣಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆಂಬ ಆರೋಪದಲ್ಲಿ ಪಾವಗಡ ಪೊಲೀಸ್ ಠಾಣೆಯ ಮೂರು ಪೊಲೀಸ್ ಪೇದೆಗಳು ಅಮಾನತು ಮಾಡಲಾಗಿದೆ ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ಮಟ್ಕಾ,ಜೂಜಾಟ ಇನ್ನಿತರ ಪ್ರಕರಣಗಳಗೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪ ಕೇಳಿ ಬಂದಿತ್ತು.
ಈ ಒಂದು ಹಿನ್ನೆಲೆಯಲ್ಲಿ ಮೂವರು ಪೇದೆಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಾನತು ಮಾಡಿದ್ದಾರೆ. ಪಾವಗಡ ತಾಲೂಕಿನಲ್ಲಿ ಅಪರಾಧ ಕೃತ್ಯಗಳಿಗೆ ಪೊಲೀಸರಿಂದಲೇ ಪ್ರೋತ್ಸಾಹ ಸಿಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು.ಈ ಹಿನ್ನೆಲೆಯಲ್ಲಿ ಸಂತೋಷ್, ಶ್ರೀಕಾಂತ್ ನಾಯಕ್, ನಟೇಶ್ ಎಂಬ ಪೇದೆಗಳನ್ನು ಸಸ್ಪೆಂಡ್ ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಸುದ್ದಿ ಸಂತೆ ನ್ಯೂಸ್ ತುಮಕೂರು…..