ಹುಬ್ಬಳ್ಳಿ –
ಲಾರಿ ಮತ್ತು ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಗದಗ ಶಿರಗುಪ್ಪಿ ಬಳಿಯ ಬೆಣ್ಣೆ ಹಳ್ಳದ ಬಳಿ ನಡೆದಿದೆ.

ಗದಗ ಕಡೆಗೆ ಹೊರಟಿದ್ದ ಟಿಪ್ಪರ್ ಇನ್ನೂ ಗದಗ ಕಡೆಯಿಂದ ಹುಬ್ಬಳ್ಳಿಯ ಕಡೆಗೆ ಬರುತ್ತಿದ್ದ ಲಾರಿ ಎರಡು ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿವೆ

ಘಟನೆಯಲ್ಲಿ ಎರಡು ವಾಹನಗಳ ಚಾಲಕರು ತೀವ್ರವಾಗಿ ಗಾಯಗೊಂಡಿದ್ದಾರೆ. ಇಬ್ಬರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈರಪ್ಪ ರಾಮಪ್ಪ ದೋಟಿಕಲ್ ಟಿಪ್ಪರ್ ಚಾಲಕ ತೀವ್ರವಾಗಿ ಗಾಯಗೊಂಡಿದ್ದು ಇನ್ನೂ ಇತ್ತ ಲಾರಿ ಚಾಲಕನು ಕೂಡಾ ಗಾಯಗೊಂಡಿದ್ದಾರೆ. ಇಬ್ಬರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನೂ ವಿಷಯ ತಿಳಿದ ಹುಬ್ಬಳ್ಳಿಯ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.