ರಾಯಚೂರು –
ಸಾಲಬಾಧೆ ತಾಳಲಾರದೆ ರೈತನೊರ್ವ ವಿಷ ಕುಡಿದು ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ.ರಾಯಚೂರು ತಾಲೂಕಿನ ಬಿ ಯಲ್ಲಾಪುರ ಗ್ರಾಮದ ನಾಗಪ್ಪ (52) ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದಾನೆ. ಈ ಬಾರಿ ಬೆಳೆದಿದ್ದ ಹತ್ತಿ ಬೆಳೆ ಕೈಕೊಟ್ಟ ಹಿನ್ನೆಲೆ ಮನನೊಂದಿದ್ದ ರೈತ ಆತ್ಮಹತ್ಯೆ ಮಾಡಿಕೊಂಡಿ ದ್ದಾನೆ.
ನಿರೀಕ್ಷಿಸದಷ್ಟು ಬೆಳೆ ಬಾರದೇ ಸಾಲದ ಸುಳಿಗೆ ಸಿಲುಕಿದ್ದ ರೈತ.ಬ್ಯಾಂಕ್ ಹಾಗೂ ಖಾಸಗಿಯಾಗಿ 5 ಲಕ್ಷಕ್ಕೂ ಅಧಿಕ ಸಾಲ ಮಾಡಿಕೊಂಡಿದ್ದ ರೈತ ನಾಗಪ್ಪ.ಅತ್ತ ಬೆಳೆಯೂ ಬಾರದೇ,ಇತ್ತ ಸಾಲ ತೀರಿಸಲಾಗದೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ರೈತ.ಜಮೀನಿನಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ ರೈತ ನಾಗಪ್ಪ ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂತೆ ನ್ಯೂಸ್ ರಾಯಚೂರು…..