ನಾಳೆ ಮುಖ್ಯಮಂತ್ರಿ ಹುಬ್ಬಳ್ಳಿ ಗೆ ಜಿಲ್ಲೆಗೆ ಆಗಮನ…..ಬೆಳಗಾವಿ ಮತ್ತು ಹುಬ್ಬಳ್ಳಿಯಲ್ಲಿ ಕೋವಿಡ್ ಸಭೆ…..

Suddi Sante Desk

ಹುಬ್ಬಳ್ಳಿ –

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಜೂ. 04 ರಂದು ಬೆಳಗಾವಿ ಮತ್ತು ಧಾರವಾಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ‌.

ಜೂ.04 ರಂದು ಬೆಂಗಳೂರಿನಿಂದ ವಿಶೇಷ ವಿಮಾ ನದ ಮೂಲಕ ಬೆಳಿಗ್ಗೆ 10.40 ಕ್ಕೆ ಬೆಳಗಾವಿಗೆ ಆಗ ಮಿಸುವರು.11 ಗಂಟೆಗೆ ಸುವರ್ಣ ವಿಧಾನಸೌಧ ಮೂರನೇ ಮಹಡಿಯ 354 ನೇ ಕೊಠಡಿಯಲ್ಲಿ ಬೆಳಗಾವಿ ಜಿಲ್ಲಾ ಕೋವಿಡ್ 19 ಹಾಗೂ ಇತರೆ ಅಭಿ ವೃದ್ಧಿ ವಿಷಯಗಳ ಕುರಿತು ಜಿಲ್ಲಾಡಳಿತದೊಂದಿಗೆ ಪರಿಶೀಲನಾ ಸಭೆ ನಡೆಸುವರು.

ಮಧ್ಯಾಹ್ನ 2 ಗಂಟೆಗೆ ಹುಬ್ಬಳ್ಳಿಗೆ ಆಗಮಿಸುವರು. ಸಂಜೆ 4 ಗಂಟೆಗೆ ಹುಬ್ಬಳ್ಳಿಯ ಸವಾಯ್ ಗಂಧರ್ವ ಕಲಾಮಂದಿರದಲ್ಲಿ ಧಾರವಾಡ ಜಿಲ್ಲಾ ಕೋವಿಡ್ 19 ಹಾಗೂ ಇತರೆ ಅಭಿವೃದ್ಧಿ ವಿಷಯಗಳ ಕುರಿತು ಜಿಲ್ಲಾಡಳಿತದೊಂದಿಗೆ ಪರಿಶೀಲನಾ ಸಭೆ ನಡೆಸು ವರು.ಸಂಜೆ 6 ಗಂಟೆಗೆ ವಿಶೇಷ ವಿಮಾನದ ಮೂಲ ಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಮುಖ್ಯ ಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.