IPS ಅಧಿಕಾರಿಗಳಿಗೆ ವರ್ಗಾವಣೆ – ಹೊಸ ವರ್ಷಕ್ಕೆ ವರ್ಗಾವಣೆ ಭಾಗ್ಯ

Suddi Sante Desk

ಬೆಂಗಳೂರು –

IPS ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ. ರಾಜ್ಯ ಸರ್ಕಾರಕ್ಕೆ ಮುಜುಗರವನ್ನುಂಟು ಮಾಡಿದ 8 ಐಪಿಎಸ್ ಅಧಿಕಾರಿಗಳೊಂದಿಗೆ ಹಲವು ಅಧಿಕಾರಿಗನ್ನು ಹೊಸ ವರ್ಷದ ಮುನ್ನಾ ದಿನವೇ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಡಿ.ರೂಪಾ, ನಿಂಬಾಳ್ಕರ್ ಸೇರಿದಂತೆ 20 ಕ್ಕೂ ಹೆಚ್ಚು ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಎತ್ತಂಗಡಿ ಮಾಡಿದೆ.

ಹೌದು ಡೈರೆಕ್ಟರ್ ಆಪ್ ಸಿವಿಲ್ ರೈಟ್ಸ್ ಎನ್ ಫೋರ್ಸ್ಮೆಂಟ್‌ನ ಎಡಿಜಿಪಿಯಾಗಿದ್ದಂತ ಕೆ.ರಾಮಚಂದ್ರರಾವ್ ಅವರನ್ನು ಗ್ರೇವಿಯನ್ಸ್ ಮತ್ತು ಹ್ಯೂಮನ್ ರೈಟ್ಸ್‍ನ ಎಡಿಜಿಪಿಯಾಗಿ ವರ್ಗಾವಣೆ ಮಾಡಿದೆ. ಗ್ರೇವಿಯೆನ್ಸ್ ಅಂಡ್ ಹ್ಯೂಮನ್ ರೈಟ್ಸ್ ಎಡಿಜಿಪಿಯಾಗಿದ್ದಂತ ಮಾಲಿನಿ ಕೃಷ್ಣಮೂರ್ತಿಯವರನ್ನು ಗೃಹ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಡಿ.ರೂಪಾ ಅವರ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ. ಡಿ.ರೂಪಾ ಅವರನ್ನು ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದ ಮ್ಯಾನೇಜಿಂಗ್ ಡೈರೆಕ್ಟರ್ ಆಗಿ ನೇಮಕ ಮಾಡಿ, ವಿವಾದಿತ ಪೋಸ್ಟಿಂಗ್ ನಿಂದ ಎತ್ತಂಗಡಿ ಮಾಡಿದೆ.

ಇನ್ನೂ ಡಿ.ರೂಪಾ ಜೊತೆ ಜೊತೆಗೆ ಐಜಿಪಿ ಹಾಗೂ ಎಸಿಪಿ ಆಗಿದ್ದಂತ ಹೇಮಂತ್ ನಿಂಬಾಳ್ಕರ್ ಅವರನ್ನು ಐಎಸ್‍ಡಿಯ ಐಜಿಪಿಯಾಗಿ ವರ್ಗಾವಣೆ ಮಾಡಿದೆ. ಎಸಿಬಿಯ ಐಜಿಪಿಯಾಗಿದ್ದಂತ ಚಂದ್ರಶೇಖರ್ ಅವರನ್ನು ಬೆಂಗಳೂರು ಕೇಂದ್ರೀಯ ವಿಭಾಗದ ಐಜಿಪಿಯಾಗಿ ನೇಮಿಸಿ ವರ್ಗಾವಣೆ ಮಾಡಲಾಗಿದೆ.

ಮೈಸೂರು ಸೌತ್ ವಿಭಾದ ಐಜಿಪಿಯಾಗಿದ್ದಂತ ವಿಪುಲ್ ಕುಮಾರ್ ಅವರನ್ನು ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಮಿಯಾ ಐಜಿಪಿ ಮತ್ತು ಡೈರೆಕ್ಟರ್ ಆಗಿ ನೇಮಕ ಮಾಡಿ ವರ್ಗಾವಣೆ ಮಾಡಲಾಗಿದೆ. ಮಂಗಳೂರಿನ ಡಿಐಜಿ ಹಾಗೂ ಕಮೀಷನರ್ ಆಗಿದ್ದಂತ ವಿಕಾಸ್ ಕುಮಾರ್ ವಿಕಾಸ್ ಅವರನ್ನು, ಕರ್ನಾಟಕ ರಿಸರ್ವ್ ಪೊಲೀಸ್ ನ ಡಿಐಜಿಆಗಿ ನೇಮಕ ಮಾಡಿ ವರ್ಗಾವಣೆ ಮಾಡಲಾಗಿದೆ.ವರ್ತಿಕಾ ಕಟಿಯಾರ್ ಅವರನ್ನು ಬೆಂಗಳೂರಿನ ಕ್ರೈಮ್ ರೆಕಾರ್ಡ್ ಬ್ಯೂರೋದ ಸೂಪರಿಡೆಂಟ್ ಆಫ್ ಪೊಲೀಸ್ ಆಗಿ, ರಂಜಿತ್ ಕುಮಾರ್ ಬಂದರು ಅವರನ್ನು ಮಂಗಳೂರು ಸೌತ್ ನ ಎಸಿಪಿ ಸ್ಥಾನದಿಂದ ಬಟ್ಕಳ ಉಪ ವಿಭಾಗದ ಎಸಿಪಿಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಹೀಗೆ ಇಪ್ಪತ್ತಕ್ಕೂ ಹೆಚ್ಚು ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಒಟ್ಟಾರೆ ಹೊಸ ವರುಷಕ್ಕೆ ರಾಜ್ಯ ಸರ್ಕಾರ ಹಲವು IPS ಅಧಿಕಾರಿಗಳಿಗೆ ವರ್ಗಾವಣೆ ಭಾಗ್ಯ ಸಿಕ್ಕಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.