ಹುಬ್ಬಳ್ಳಿ –
72 ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿಂದು ನಿವೃತ್ತ ಸೈನಿಕರಿಗೆ ಸನ್ಮಾನ ಕಾರ್ಯಕ್ರಮವನ್ನು ಹುಬ್ಬಳ್ಳಿಯ ಕನಕದಾಸ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು.

ವಿದ್ಯಾನಗರದ ಕನಕದಾಸ ಕಾಲೇಜಿನ ಈ ಒಂದು ಸಭಾಂಗಣದಲ್ಲಿ ಕರ್ನಾಟಕ ಸೋಷಿಯಲ್ ಕ್ಲಬ್ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ನಿವೃತ್ತ ಸೈನಿಕರಿಗೆ ಸೇವಾರತ್ನ ಪಶ್ರಸ್ತಿ ನೀಡಲಾಯಿತು.

ದೇಶದ ಸೈನ್ಯಕ್ಕೆ ಸೇರಿ ನಿವೃತ್ತಿ ಹೊಂದಿರುವ ಸಂಗಪ್ಪ ಸಾಳಗುಂದಿ ಹಾಗೂ ರಮೇಶ್ ಎಂ ಗೋಕಾವಿ ಅವರಿಗೆ ಸೇವಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಇದೇ ವೇಳೆ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು.ಇನ್ನು ಇದೇ ವೇಳೆ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಆಯೋಜಿಸಲಾಗಿತ್ತು.
