ಬೆಂಗಳೂರು –
ರಾಜ್ಯ ಸರ್ಕಾರಿ ನೌಕರರಿಗೆ ಕೊನೆಗೂ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಸಿಹಿ ಸುದ್ದಿ ನೀಡಿದ್ದಾರೆ.ಹೌದು ಎಲ್ಲಾ ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1ರಿಂದ ಜಾರಿಗೆ ಬರುವಂತೆ ಶೇ 2.75ರಷ್ಟು ತುಟ್ಟಿಭತ್ಯೆ ಹೆಚ್ಚಿಸಲು ನಿರ್ಧರಿ ಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಈ ಸಂಬಂಧ ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಸಿಎಂ ಬೊಮ್ಮಾಯಿ ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1 ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ.2.75 ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ.ಇದಕ್ಕಾಗಿ ಸರ್ಕಾರ 1447 ಕೋಟಿ ರೂ. ವಾರ್ಷಿಕ ವೆಚ್ಚ ಭರಿಸಲಿದೆ. ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದು ಹೇಳಿದ್ದಾರೆ.



ಈ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ.ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1 ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ. 2.75 ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸರ್ಕಾರ 1447 ಕೋಟಿ ರೂ. ವಾರ್ಷಿಕ ವೆಚ್ಚ ಭರಿಸಲಿದೆ. ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಉಲ್ಲೇಖ ಮಾಡಿದ ಟ್ವೀಟ್‌ನಲ್ಲಿ ಮಾಹಿತಿಯನ್ನು ಹಾಕಿದ್ದಾರೆ