ಹುಬ್ಬಳ್ಳಿ –
ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಹುಬ್ಬಳ್ಳಿಯ ಹೊರವಲಯದ ತಾರಿಹಾಳ ಬಳಿ ನಡೆದಿದೆ. ಪುನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಯಲ್ಲಿ ಈ ಒಂದು ಅಪಘಾತ ನಡೆದಿದೆ.

ಬೆಳ್ಳಂ ಬೆಳಿಗ್ಗೆ ಈ ಒಂದು ಅಪಘಾತ ನಡೆದಿದೆ. ಘಟನೆಯಲ್ಲಿ ಎರಡು ಲಾರಿಗಳು ಮುಖಾಮುಖಿ ಡಿಕ್ಕಿಯಾಗಿವೆ.ಎರಡು ಲಾರಿಗಳಲ್ಲಿನ ಇಬ್ಬರು ಚಾಲಕರು ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.



ಇನ್ನೂ ವಿಷಯ ತಿಳಿದ ಹುಬ್ಬಳ್ಳಿಯ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.