ಬೆಂಗಳೂರು –
ಹೌದು ರಾಜ್ಯದಲ್ಲಿ ಪ್ರತ್ಯೇಕವಾದ ಎರಡ ಪ್ರಕರಣದಲ್ಲಿ ಇಬ್ಬರು ಪೊಲೀಸ್ ಪೇದೆಗಳು ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ.ಉಡುಪಿಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯ ಉತ್ತರ ಪತ್ರಿಕೆ ಮೌಲ್ಯಮಾಪನ ನಡೆಯುತ್ತಿದ್ದ ಕೇಂದ್ರದ ಬಳಿ ಬಂದೋಬಸ್ತ್ ಗೆ ನಿಯೋಜನೆಗೊಂಡಿದ್ದ ಪೇದೆಯೊ ಬ್ಬರು ಸ್ಥಳದಲ್ಲೇ ಗುಂಡಿಕ್ಕಿಕೊಂಡು ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲಾ ಕೇಂದ್ರದ ಆದಿ ಉಡುಪಿ ಪ್ರೌಢಶಾಲೆ ಆವರಣದಲ್ಲಿ ಸಶಸ್ತ್ರ ಮೀಸಲು ಪಡೆಯ ಮುಖ್ಯಪೇದೆ ರಾಜೇಶ್ ಕುಲಾಲ್ ಗುಂಡಿಕ್ಕಿಕೊಂಡು ಮೃತಪಟ್ಟಿದ್ದಾರೆ. ಪ್ರೌಢಶಾಲೆಯ ಕೊಠಡಿಯೊಳಗೆ ಎಸ್ ಎಸ್ ಎಲ್ ಸಿ ಪರೀಕ್ಷೆಯ ಪತ್ರಿಕೆಯ ಮೌಲ್ಯಮಾಪನ ನಡೆಯುತ್ತಿದೆ.ಇತ್ತ ಉತ್ತರ ಪತ್ರಿಕೆ ಕೊಠಡಿಯ ಭದ್ರತಾ ನಿರ್ವಹಣೆಯಲ್ಲಿದ್ದ ರಾಜೇಶ್ ಕುಂದರ್ ತಮ್ಮದೇ ಸರ್ವೀಸ್ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇನ್ನೂ ಸುದ್ದಿ ತಿಳಿದ ಉಡುಪಿ ನಗರ ಠಾಣಾ ಪೊಲೀಸರು ಸ್ಥಳಕ್ಕೇ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಇನ್ನೂ ಇತ್ತ ಬೆಂಗಳೂರು ಉತ್ತರ ತಾಲೂಕು ಹೆಸರಘಟ್ಟದಲ್ಲಿ ಮತ್ತೊಬ್ಬ ಮುಖ್ಯಪೇದೆ ನೇಣಿಗೆ ಶರಣಾಗಿದ್ದಾರೆ.ಒಂದು ತಿಂಗಳ ಹಿಂದೆ ಗಂಗೊಳ್ಳಿಯಲ್ಲಿ ಸಿಬ್ಬಂದಿ ನಡುವೆ ನಡೆದ ಹೊಡೆದಾಟದಲ್ಲಿ ಮಂಜುನಾಥ್ ಅವರು ಅಮಾನತು ಗೊಂಡಿದ್ದು ನಿನ್ನೆಯಷ್ಟೇ ಕರ್ತವ್ಯಕ್ಕೆ ಹಾಜರಾಗಿದ್ದರು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಡಿವೈಎಸ್‌ಪಿ ಹಾಗೂ ಬೆಂ. ಉತ್ತರ ತಾಲೂಕಿನ ಹೆಸರುಘಟ್ಟದಲ್ಲಿ ಕೋಡಿಗೆಹಳ್ಳಿ ಪೊಲೀಸರು ಸ್ಥಳಕ್ಕೇ ಭೇಟಿ ನೀಡಿ ಪರಿಶೀಲನೆ ಮಾಡಿದರು ಮುಖ್ಯಪೇದೆ ಮಂಜುನಾಥ್(44) ಆತ್ಮಹತ್ಯೆ ಮಾಡಿಕೊಂ ಡಿದ್ದು ಮೂರು ತಿಂಗಳಿಂದ ಕೆಲಸಕ್ಕೆ ತೆರಳದೆ ಮನೆಯಲ್ಲೇ ಇದ್ದ ಮಂಜುನಾಥ್ ಖಿನ್ನತೆಯಿಂದ ಬಳಲುತ್ತಿದ್ದರು. ಮನೆ ಯವರೆಲ್ಲರೂ ಊರಿಗೆ ತೆರಳಿದ್ದ ವೇಳೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.ಸರಿಯಾಗಿ ಕೆಲಸಕ್ಕೆ ಹೋಗದೆ ಕುಡಿತ ಚಟ ಅಂಟಿಸಿಕೊಂಟಿದ್ದರಂತೆ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.