ಚಿಕ್ಕಬಳ್ಳಾಪುರ –
ಚಿಕ್ಕಬಳ್ಳಾಪೂರ ದಲ್ಲಿನ ಸ್ಪೋಟ ಪ್ರಕರಣ ಕುರಿತಂತೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.ಹಿರೇನಾಗವಲ್ಲಿ ಬಳಿ ಜಿಲೆಟಿನ್ ಸ್ಫೋಟ ಪ್ರಕರಣದಲ್ಲಿ CPI, PSI,ಇಬ್ಬರನ್ನು ಅಮಾನತು ಮಾಡಲಾಗಿದೆ.

ಗುಡಿಬಂಡೆ PSI ಹಾಗೂ CPI ಅವರನ್ನು ಸಧ್ಯ ಹಿರಿಯ ಪೊಲೀಸ್ ಅಧಿಕಾರಿಗಳು ಅಮಾನತು ಮಾಡಿ ಆದೇಶ ಮಾಡಲಾಗಿದೆ.

ಗುಡಿಬಂಡೆ PSI ಗೋಪಾಲ್ ರೆಡ್ಡಿ ಮತ್ತು ಪೊಲೀಸ್ ಇನ್ಸ್‌ಪೆಕ್ಟರ್ ಮಂಜುನಾಥ್ ಅವರನ್ನು ಅಮಾನತು ಮಾಡಲಾಗಿದೆ.

ಕೇಂದ್ರ ವಲಯ ಐಜಿಪಿ ಚಂದ್ರಶೇಖರ್ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಮಾಡಲಾಗಿದೆ. ಇನ್ನೂ ಪ್ರಮುಖವಾಗಿ ಈ ಒಂದು ಪ್ರಕರಣದಲ್ಲಿ ಮೊದಲು ಗಣಿ ಮತ್ತು ಭೂವಿಜ್ಞಾನ ಇಲಾಖೆ ,ಜಿಲ್ಲಾಧಿಕಾರಿ ಸೇರಿದಂತೆ ಹಲವರು ಮೊದಲ ಸ್ಥಾನದಲ್ಲಿ ಬರುತ್ತಾರೆ ಆದರೆ ಅದನ್ನೇಲ್ಲವನ್ನು ಬಿಟ್ಟು ಈಗ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದ್ದು ಸರಿನಾ ಎಂಬ ಪ್ರಶ್ನೆ ಸಾರ್ವಜನಿಕರು ಕೇಳುತ್ತಿದ್ದಾರೆ.