ಉಡುಪಿ –
ರಾಜ್ಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಸದ್ದು ಮಾಡಿದ್ದ ಉಡುಪಿ ಕಾಲೇಜ್ ನಲ್ಲಿನ ವಿಡಿಯೊ ಚಿತ್ರೀಕರಣ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ
ಹೌದು ಇಲ್ಲಿಯ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ನಡೆದ ವೀಡಿಯೋ ಚಿತ್ರೀಕರಣ ಪ್ರಕರಣದ ತನಿಖೆಯನ್ನು ರಾಜ್ಯ ಸರಕಾರ ಸಿಐಡಿಗೆ ಒಪ್ಪಿಸಿದೆ.ಜು.18ರಂದು ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಶೌಚಾಲಯಕ್ಕೆ ಹೋದ ಅದೇ ವರ್ಷದ ವಿದ್ಯಾರ್ಥಿನಿಯೊಬ್ಬಳ ವೀಡಿಯೊ ಚಿತ್ರೀಕರಣ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.
ಈ ಸಂಬಂಧ ವಾರದ ಬಳಿಕ ಮಲ್ಪೆ ಪೊಲೀಸರು ಸ್ವಯಂ ಪ್ರೇರಿತರಾಗಿ ಪ್ರಕರಣ ದಾಖಲಿಸಿಕೊಂ ಡಿದ್ದು, ತನಿಖೆ ಆರಂಭಿಸಿದ್ದರು ಇದೀಗ ರಾಜ್ಯ ಸರಕಾರ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಿ ಆದೇಶ ನೀಡಿದೆ.
ಸುದ್ದಿ ಸಂತೆ ನ್ಯೂಸ್ ಉಡುಪಿ…..






















