ಹುಬ್ಬಳ್ಳಿ –
ಹುಬ್ಬಳ್ಳಿಗೆ ಮತ್ತೊಂದು ಸಿಹಿ ಸುದ್ದಿಯನ್ನು ಕೊಟ್ಟಿದ್ದಾರೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು.ಹುಬ್ಬಳ್ಳಿಯಲ್ಲಿ FTC ಸ್ಥಾಪನೆಗೆ ಕೇಂದ್ರ ನಾಗರಿಕ ವಿಮಾನಯಾನ ಸಚಿವಾ ಲಯ ಅಸ್ತು ನೀಡಿದೆ.
ಫ್ಲೈಯಿಂಗ್ ಟ್ರೈನಿಂಗ್ ಸೆಂಟರ್ ಸ್ಥಾಪಿಸಲು ಕೇಂದ್ರದಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಸಚಿವಾಲಯಕ್ಕೆ ಧನ್ಯವಾದಗಳನ್ನು ಹೇಳಿದ್ದಾರೆ ಸಾಮಾಜಿಕ ಜಾಲತಾಣದಲ್ಲಿ ಧನ್ಯವಾದ ಸಲ್ಲಿಸಿದ್ದಾರೆ ಪ್ರಹ್ಲಾದ್ ಜೋಶಿ ಅವರು.ಈ ಹಿಂದೆ ನಾನು ಮಾಡಿದ ಮನವಿಗೆ ಸ್ಪಂದಿಸಿದ್ದಕ್ಕೆ ಧನ್ಯವಾದ ಎಂದು ಫೇಸ್ಬುಕ್ ನಲ್ಲಿ ಖುಷಿ ಹಂಚಿಕೊಂಡಿದ್ದಾರೆ ಜೋಶಿ ಅವರು.ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾಧಿತ್ಯ ಸಿಂಧ್ಯಾ ಮತ್ತು ಪ್ರಧಾನಿಗೆ ಧನ್ಯವಾದ ತಿಳಿಸಿದ ಪ್ರಹ್ಲಾದ್ ಜೋಶಿ ಅವರು.