This is the title of the web page
This is the title of the web page

Live Stream

June 2023
T F S S M T W
1234567
891011121314
15161718192021
22232425262728
2930  

| Latest Version 8.0.1 |

ಧಾರವಾಡ

ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮ ಸ್ಥಳ ಪರಿಶೀಲನೆ ಮಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ – ಸ್ಥಳ ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡ ಸಚಿವರು…..


ಹುಬ್ಬಳ್ಳಿ

ಪ್ರಧಾನಿ ಮೋದಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಸ್ಥಳ ಪರಿಶೀಲನೆ ಮಾಡಿದರು.ಹೌದು ರಾಷ್ಟ್ರೀಯ ಯುವಜನೋತ್ಸವ ಕಾರ್ಯ ಕ್ರಮ ಜನವರಿ ೧೨ ರಿಂದ ಎರಡು ದಿನಗಳ ಕಾಲ ನಡೆ ಯಲಿದ್ದು ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ಕಾರ್ಯಕ್ರಮ ಯಶಸ್ವಿಗೊಳಿಸಲು ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ತಿಳಿಸಿದ್ದಾರೆ.

ರೈಲ್ವೆ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಯವರು ಭಾಗವಹಿಸಲಿರುವ ಸಾರ್ವಜನಿಕ ಸಭೆಯ ವೇದಿಕೆ ಸಿದ್ಧತಾ ಕಾರ್ಯಗಳ ಕುರಿತು ಪರಿಶೀಲನೆ ನಡೆಸಿದರು.ಈಗಾಗಲೇ ಅವರ ಕಾರ್ಯಕ್ರಮ ಪಟ್ಟಿ ಬಂದಿದೆ.ಕಾರ್ಯಕ್ರಮ ಅಚ್ಚುಕಟ್ಟಾಗಿ ಜರುಗಬೇಕೆಂಬ ಉದ್ದೇಶದಿಂದ  ಸಂಬಂಧಪಟ್ಟ ಎಲ್ಲಾ ಅಧಿಕಾರಿ ವರ್ಗದವ ರೊಂದಿಗೆ  ಸ್ಥಳ ಪರಿಶೀಲನೆ ಮಾಡಿ ಸಕಲ ಸಿದ್ಧತೆಯನ್ನು ಪರಿಶೀಲಿಸಿದರು.ಎಸ್ ಪಿಜಿ ಮಾರ್ಗದರ್ಶನದಲ್ಲಿ ಭದ್ರತಾ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಯುವಜನೋತ್ಸವ 

ಭಾರತದಲ್ಲಿ ರಾಷ್ಟ್ರೀಯ ಯುವ ಉತ್ಸವವು ಸ್ಪರ್ಧಾತ್ಮಕ ಚಟುವಟಿಕೆಗಳನ್ನು ಒಳಗೊಂಡAತೆ ವಿವಿಧ ಚಟುವಟಿಕೆಗಳೊಂದಿಗೆ ಯುವಕರ ವಾರ್ಷಿಕ ಕೂಟವಾಗಿದೆ.ಯುವ ಐಕಾನ್ ಸ್ವಾಮಿ ವಿವೇಕಾನಂದರ ಜನ್ಮದಿನದ ಸ್ಮರಣಾರ್ಥವಾಗಿ ಆಚರಿಸಲಾಗುತ್ತದೆ, ಇದನ್ನು ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲ ಯವು ರಾಜ್ಯ ಸರ್ಕಾರಗಳ ಸಹಯೋಗದೊಂ ದಿಗೆ ಆಯೋಜಿಸಿದೆ.ಹೀಗೆ ಪ್ರತಿ ವರ್ಷ ರಾಷ್ಟ್ರೀಯ ಯುವ ಸಪ್ತಾಹದಲ್ಲಿ ಪ್ರತಿ ವರ್ಷ ಜನವರಿ ೧೨ ರಿಂದ ೧೬ ರವರೆಗೆ ಬೇರೆ ಬೇರೆ ರಾಜ್ಯದಲ್ಲಿ ನಡೆ ಯುತ್ತದೆ. ಈ ಭಾರಿ ನಮ್ಮ ಹೆಮ್ಮೆಯ ಹುಬ್ಬಳ್ಳಿ-ಧಾರವಾಡ ಅವಳಿನಗರದಲ್ಲಿ ನಡೆಯುತ್ತಿರು ವುದು ಹೆಮ್ಮೆಯ ವಿಷಯ.

ಜನವರಿ ೧೨ ರಂದು ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ಯಾವಾಗಲೂ ರಾಷ್ಟ್ರೀಯ ಯುವ ದಿನವೆಂದು ಆಚರಿಸಲಾಗುತ್ತದೆ ಮತ್ತು ಆ ದಿನದಿಂದ ಪ್ರಾರಂಭವಾಗುವ ವಾರವನ್ನು ರಾಷ್ಟ್ರೀಯ ಯುವ ವಾರ ಎಂದು ಕರೆಯಲಾಗು ತ್ತದೆ. ರಾಷ್ಟ್ರೀಯ ಯುವ ಸಪ್ತಾಹದ ಆಚರಣೆಯ ಭಾಗವಾಗಿ, ಭಾರತ ಸರ್ಕಾರವು ಪ್ರತಿ ವರ್ಷ ರಾಷ್ಟ್ರೀಯ ಯುವ ಉತ್ಸವವನ್ನು ನಡೆಸುತ್ತದೆ. ಇದು ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಈವೆಂಟ್ ಆಗಿದೆ ಮತ್ತು ಇದನ್ನು ವಾರ್ಷಿಕವಾಗಿ ಒಂದು ರಾಜ್ಯಗ ಳಲ್ಲಿ ಜಂಟಿ ಉದ್ಯಮದಲ್ಲಿ ಆಚರಿಸಲಾಗುತ್ತದೆ. ಯುವಜನೋತ್ಸವವು ರಾಷ್ಟ್ರೀಯ ಏಕೀಕರಣದ ಪರಿಕಲ್ಪನೆ

ಕೋಮು ಸೌಹಾರ್ದತೆಯ ಮನೋಭಾವ, ಸಹೋದರತ್ವ,ಧೈರ್ಯ ಮತ್ತು ಸಾಹಸವನ್ನು ಯುವಜನರಲ್ಲಿ ಸಾಮಾನ್ಯ ವೇದಿಕೆಯಲ್ಲಿ ತಮ್ಮ ಸಾಂಸ್ಕೃತಿಕ ಕೌಶಲ್ಯವನ್ನು ಪ್ರದರ್ಶಿಸುವ ಮೂಲಕ ಪ್ರಚಾರ ಮಾಡುವ ಗುರಿಯನ್ನು ಹೊಂದಿದೆ. ದೇಶಾದ್ಯಂತ ಯುವಕರ ಕೂಟಗ ಳನ್ನು ಆಯೋಜಿಸುವ ಮೂಲಕ ಮತ್ತು ವಿವಿಧ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಅವರನ್ನು ಪ್ರೋತ್ಸಾಹಿಸುವ ಮೂಲಕ ಇದನ್ನು ಮಾಡಲಾ ಗುತ್ತದೆ.

ಉತ್ಸವದಲ್ಲಿ ನಡೆಯುವ ಚಟುವಟಿಕೆಗಳಲ್ಲಿ ಸ್ಪರ್ಧಾತ್ಮಕ ಮತ್ತು ಸ್ಪರ್ಧಾತ್ಮಕವಲ್ಲದ ಸಾಂಸ್ಕೃ ತಿಕ ಕಾರ್ಯಕ್ರಮಗಳು,ಸಮರ ಕಲೆಗಳು, ಪ್ರದ ರ್ಶನಗಳು, ಬೌದ್ಧಿಕ ಪ್ರವಚನಗಳು, ಯುವ ಕಲಾವಿದರ ಶಿಬಿರಗಳು,ವಿಚಾರಗೋಷ್ಠಿಗಳು ಮತ್ತು ಸಾಹಸ ಕಾರ್ಯಕ್ರಮಗಳು ಸೇರಿವೆ. ರಾಷ್ಟ್ರೀಯ ಯುವ ಪ್ರಶಸ್ತಿಗಳ ಪ್ರದಾನವೂ ನಡೆಯುತ್ತದೆ ಎಂದು ಸಚಿವ ಜೋಶಿಯವರು ತಿಳಿಸಿದ್ದಾರೆ.

ಈ ಎಲ್ಲಾ ಕಾರ್ಯಕ್ರಮಗಳ ಸಿದ್ಧತೆಗಳ ವೀಕ್ಷಣೆ ಮಾಡಿದ್ದು, ಅಚ್ಚುಕಟ್ಟಾಗಿ ಸಿದ್ಧತೆ ಆಗುತ್ತಿದೆ. ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲಾಗು ತ್ತಿದೆ ಪ್ರಧಾನಮಂತ್ರಿಗಳು ಆಗಮಿಸುವ ಸಂದರ್ಭದಲ್ಲಿ ಅತಿ ಹೆಚ್ಚು ಜನ ಸೇರುತ್ತಾರೆ. ಆದ್ದರಿಂದ ಅಗತ್ಯ ವ್ಯವಸ್ಥೆ ಮಾಡಲು ಸಂಬಂಧಪಟ್ಟ ಅಧಿಕಾರಿಗ ಳಿಗೆ ತಿಳಿಸಲಾಗಿದೆ.ಅವಳಿ ನಗರದ ಮಹಾಜನತೆ ವಿಶೇಷವಾಗಿ ಯುವಜನತೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕೋರುತ್ತೇನೆ ಎಂದು ಹೇಳಿದರು

ಈ ಸಂದರ್ಭದಲ್ಲಿ ನೈಋತ್ಯ ರೈಲ್ವೆ ಜನರಲ್ ಮ್ಯಾನೇಜರ್ ಶ್ರೀ ಸಂಜೀವ ಕಿಶೊರ್, ಡಿ.ಆರ್ .ಎಂ.ಹರ್ಶಾ ಖರೆ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪೊಲೀಸ್ ಕಮೀಷನರ್ ರಮಣ ಗುಪ್ತಾ ಪಾಲಿಕೆ ಕಮೀಷನರ್ ಡಾ. ಗೋಪಾಲ ಕೃಷ್ಣ, ಲೋಕೋಪಯೋಗಿ ಇಲಾಖೆ,ಹಾಗೂ ಇನ್ನಿತರೆ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದು ಸಿದ್ಧತೆಗಳ ಮಾಹಿತಿಯನ್ನು ಸಚಿವರಿಗೆ ನೀಡಿದರು.

ಚಕ್ರವರ್ತಿ ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..


Google News Join The Telegram Join The WhatsApp

 

 

Suddi Sante Desk

Leave a Reply