ಹುಬ್ಬಳ್ಳಿ –
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಭಾಗದಲ್ಲಿ ಇರುವ ಕೆಲವೊಂದು ಮೂಲಭೂತ ಸೌಕರ್ಯಗಳ ಸಮಸ್ಯೆಗಳ ಬಗ್ಗೆ ಸಾರ್ವಜನಿಕರಿಂದ ದೂರು ಬಂದಿದ್ದು ಇಂದು ಇದಕ್ಕೆ ಸಂಬಂಧಿಸಿದ ಅಧಿಕಾರಿಗಳ ಸಭೆಯನ್ನು ಹುಬ್ಬಳ್ಳಿಯಲ್ಲಿ ಕರೆಯಲಾಗಿತ್ತು.

ನೀರಿನ ಸಮಸ್ಯೆ ಬಗ್ಗೆ ಕ್ಷೇತ್ರದ ಜನರಿಂದ ದೂರು ಬಂದಿದ್ದು ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ಗಂಭೀರವಾಗಿ ಪರಿಗಣಿಸಿ ಎಂದು ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಅವರು ಸೂಚನೆ ನೀಡಿದರು

ಮಾಜಿ ಮುಖ್ಯಮಂತ್ರಿಗಳು ಮತ್ತು ಶಾಸಕರಾದ ಜಗದೀಶ್ ಶೆಟ್ಟರ್,ಸಚಿವರಾದ ಶಂಕರ ಪಾಟೀಲ್ ಮುನೇನಕೊಪ್ಪ ಧಾರವಾಡದ ಉಸ್ತುವಾರಿ ಸಚಿವರಾದ ಹಾಲಪ್ಪ ಆಚಾರ್ಯ ,ಶಾಸಕರಾದ ಅರವಿಂದ್ ಬೆಲ್ಲದ,ಅಮೃತ ದೇಸಾಯಿ,ಹು-ಧಾ ಮಹಾಪೌರರಾದ ಈರೇಶ್ ಅಂಚಟ ಗೇರಿ ಹಾಗೂ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.