ಕಲಬುರಗಿ –
ಮುಂಬರುವ ಚುನಾವಣೆಯ ದೃಷ್ಟಿಯಿಂದ ಪಕ್ಷದ ಸಂಘಟನೆಗೆ ರಾಜ್ಯದಲ್ಲಿ ಮೂರು ತಂಡಗಳನ್ನು ರಚಿಸಿ ಈಗಾಗಲೇ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದು ಇಂದು ಕಲಬುರ್ಗಿಯಲ್ಲಿ ಭಾಜಪ ಪ್ರಮುಖರ ಸಭೆ ನಡೆಸಲಾ ಯಿತು.ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಮುಖ್ಯಮಂತ್ರಿ ಅವರೊಂದಿಗೆ ಈ ಒಂದು ಸಭೆಯಲ್ಲಿ ಪಾಲ್ಗೊಂಡರು
ಇದೇ ವೇಳೆ ಸಭೆಯಲ್ಲಿ ಪ್ರತಿಯೊಬ್ಬರೂ ಜವಾಬ್ದಾರಿ ಯುತವಾಗಿ ಕಾರ್ಯಕರ್ತರನ್ನು ಒಗ್ಗೂಡಿಸಿ ಸಂಘಟನಾತ್ಮ ಕವಾಗಿ ಕಾರ್ಯ ನಿರ್ವಹಿಸುವಂತೆ ಪಕ್ಷದ ಪ್ರಮುಖರಿಗೆ ಸೂಚಿಸಲಾಯಿತು ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರದ ಪ್ರತಿಯೊಂದು ಜನಪರ ಯೋಜನೆಗಳನ್ನು ಕೂಡ ಪ್ರತಿ ಯೊಬ್ಬ ಜನಸಾಮಾನ್ಯರಿಗೂ ತಿಳಿಸಿ ಅದರ ಪ್ರಯೋಜನ ಪಡೆಯುವಂತಾಗಬೇಕು ಎಂಬುದನ್ನು ಸಭೆಯಲ್ಲಿ ಗಂಭೀ ರವಾಗಿ ಚರ್ಚಿಸಲಾಗಿದ್ದು ಇದಕ್ಕಾಗಿ ಪ್ರತಿಯೊಬ್ಬರೂ ಒಗ್ಗಟ್ಟಿನಿಂದ ಕಾರ್ಯ ನಿರ್ವಹಿಸುವಂತೆ ಕೇಂದ್ರ ಸಚಿವರು ಸೂಚಿಸಿದರು.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಸಚಿವರು ಪಕ್ಷದ ಮುಖಂಡರು ಸೇರಿದಂತೆ ಹಲವರು ಉಪಸ್ಥಿತರಿದ್ದರು