ಬಿಡದಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ – ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಗಂಟೆ ಎಂದ್ರು ಪ್ರಹ್ಲಾದ್ ಜೋಶಿ…..

Suddi Sante Desk
ಬಿಡದಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ – ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಗಂಟೆ ಎಂದ್ರು ಪ್ರಹ್ಲಾದ್ ಜೋಶಿ…..

ಹುಬ್ಬಳ್ಳಿ

ಬಿಡದಿ ರೈತ ಮಹಿಳೆಯರ ಪೊರಕೆ ಸೇವೆ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಗಂಟೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೌದು ಭೂ ಮಿತಾಯಿ ಉಳಿಸಿಕೊಳ್ಳಲು ಅನ್ನದಾತರ ಒಡಲ ಆಕ್ರೋಶವಿದು ಬಿಡದಿ ಟೌನ್ ಶಿಪ್ ಗೆಂದು ಜಂಟಿ ಮಾಪನ (JMC) ಸಮೀಕ್ಷೆಗೆ ಹೋದ ಅಧಿಕಾರಿಗಳಿಗೆ ರೈತ ಮಹಿಳೆಯರು ಪೊರಕೆಯಿಂದ ಥಳಿಸಿರುವ ಘಟನೆ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಗಂಟೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಎಚ್ಚರಿಕೆ ನೀಡಿದ್ದಾರೆ.ಬಿಡದಿ ರೈತರ ಹೋರಾಟ ಕೇವಲ ಒಂದು ಸಾಮಾನ್ಯ ಪ್ರತಿಭಟನೆಯಲ್ಲ ಅದು ತುತ್ತು ಅನ್ನ ನೀಡುವ ಭೂಮಿ ತಾಯಿಯನ್ನು ಉಳಿಸಿ ಕೊಳ್ಳುವಲ್ಲಿ ರೈತರೊಡಲ ಆಕ್ರೋಶವಾಗಿದೆ ಎಂದಿದ್ದಾರೆ ಜೋಶಿ.

ಇದೊಂದು ಸರ್ಕಾರದ್ದು ಅತಿರೇಕದ ನಡೆಯಾಗಿದ್ದು ಬಿಡದಿ ಟೌನ್‌ಶಿಪ್ ನೆಪದಲ್ಲಿ ಅನ್ನದಾತರ ಜಮೀನು ಕಸಿದುಕೊಳ್ಳಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಅತಿರೇಕ ದ್ದಾಗಿದೆ ಹಾಗಾಗಿ ರೈತ ಮಹಿಳೆಯರು ಪೊರಕೆ ಕೈಗೆ ತೆಗೆದು ಕೊಂಡಿದ್ದಾರೆ ಸರ್ಕಾರ ಇನ್ನಾದರೂ ಕಣ್ತೆರೆದುಕೊಳ್ಳಬೇಕಿದೆ ಎಂದು ಚಾಟಿ ಬೀಸಿದ್ದಾರೆ.

ದುರಾಡಳಿತದ ಪರಮಾವಧಿ ರೈತರ ಬಗ್ಗೆ ಕಾಳಜಿಯೇ ಇಲ್ಲದ ರಾಜ್ಯ ಕಾಂಗ್ರೆಸ್ ಸರ್ಕಾರ ಸರ್ವಾಧಿಕಾರಿ ಧೋರಣೆಯಲ್ಲಿ ಮುನ್ನುಗ್ಗುತ್ತಿರುವುದು ದುರಾಡಳಿತದ ಪರಮಾವಧಿ ಎಂದು ಕಿಡಿ ಕಾರಿದ ಜೋಶಿ, ರೈತರ ಒಪ್ಪಿಗೆಯಿಲ್ಲದೆ ಅವರ ಜೀವನಾ ಧಾರವಾಗಿರುವ ಭೂಮಮಿಯನ್ನೇ ಕಿತ್ತುಕೊಂಡು ಮಾಡುವ ‘ಟೌನ್‌ಶಿಪ್’ ಅಭಿವೃದ್ಧಿ ಯಾರ ಉದ್ಧಾರಕ್ಕಾಗಿ? ಎಂದು ಪ್ರಶ್ನಿಸಿದ್ದಾರೆ.

ಪೊಲೀಸ್ ಬಲಪ್ರಯೋಗ ಸರಿಯಲ್ಲ  ಶಾಂತಿಯುತ ಬದುಕು ನೂಕುತ್ತಿರುವ ರೈತರನ್ನು ಹೆದರಿಸಿ, ಬೆದರಿಸಿ ಜಮೀನು ವಶಪಡಿಸಿಕೊಳ್ಳಲು ಯತ್ನಿಸುತ್ತಿರುವ ಸರ್ಕಾರದ ಧೋರಣೆ ಖಂಡನೀಯ. ಮುಗ್ಧ ರೈತರನ್ನು ಬೆದರಿಸಿ, ಪೊಲೀಸ್ ಬಲ ಬಳಸಿ ಜಮೀನು ಕಿತ್ತುಕೊಳ್ಳಬಹುದು ಎಂದುಕೊಂಡಿದ್ದರೆ ಅದು ಭ್ರಮೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ರೈತರ ಹೋರಾಟಕ್ಕೆ ಸಂಪೂರ್ಣ ಬೆಂಬಲವಿದ್ದು ಇದು ಕೇವಲ ಬಿಡದಿ ರೈತರ ಹೋರಾಟವಲ್ಲ, ರಾಜ್ಯದ ಸಮಸ್ತ ಜನತೆಯ ಆಕ್ರೋಶ. ರೈತರ ಭೂಮಿ ಅವರ ಹಕ್ಕು, ಅವರ ಬೆಂಬಲವಿಲ್ಲದೆ, ಅವರ ಭೂಮಿಯನ್ನು ಕಿತ್ತುಕೊಳ್ಳುವುದು ಸರಿಯಲ್ಲ. ರೈತರ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದೂ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

 

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.