ಬೆಂಗಳೂರು –
7ನೇ ವೇತನ ಆಯೋಗಕ್ಕೆ ಅನುಮೋದನೆ ನೀಡಿದ ಸಮಸ್ತ ಸಚಿವ ಸಂಪುಟಕ್ಕೆ ಧನ್ಯವಾದ ಹೇಳಿದ ರಾಜ್ಯ ಸರ್ಕಾರಿ ನೌಕರರ ಸಂಘಟನೆ – ಸಮಸ್ತ ಸರ್ಕಾರಿ ನೌಕರರ ಪರವಾಗಿ ಸಮಸ್ತ ರಾಜ್ಯ ಸರ್ಕಾರದ ಟೀಮ್ ಗೆ ಧನ್ಯವಾದ ತಿಳಿಸಿದ ಸಂಘಟನೆ ಹೌದು
ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಸಮಸ್ತ ಸರ್ಕಾರಿ ನೌಕರರು ನಿರೀಕ್ಷೆಯನ್ನು ಮಾಡುತ್ತಿದ್ದ 7ನೇ ವೇತನ ಆಯೋಗವನ್ನು ಕೊನೆಗೂ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.ಒಂದು ಕಡೆಗೆ ರಾಜ್ಯದಲ್ಲಿ ಸರ್ಕಾರಿ ನೌಕರರ ಹೋರಾಟದ ಕಾವು ದಿನದಿಂದ ದಿನಕ್ಕೆ ಜೋರಾಗುತ್ತಿತ್ತು
ಇನ್ನೊಂದೆಡೆ ಈ ಒಂದು ವಿಚಾರ ಕುರಿತಂತೆ ರಾಜ್ಯ ಸರ್ಕಾರ ಗಂಭೀರವಾಗಿ ತಗೆದುಕೊಂಡು ಸಚಿವ ಸಂಪುಟದ ಸಭೆಯಲ್ಲಿ ವಿಷಯವನ್ನು ಪ್ರಸ್ತಾಪ ಮಾಡಿ ಕೊನೆಗೂ 7ನೇ ವೇತನ ಆಯೋಗಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.ಅತ್ತ ಒಪ್ಪಿಗೆ ನೀಡುತ್ತಿ ದ್ದಂತೆ ಇತ್ತ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ,ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಸಚಿವ ಸಂಪುಟದ ಸಮಸ್ತ ಸಚಿವರಿಗೆ ರಾಜ್ಯ ಸರ್ಕಾರಿ ನೌಕರರ ಸಂಘಟನೆಯಿಂದ ಅಭಿನಂದನೆಗಳನ್ನು ಸಲ್ಲಿಸಿ ಧನ್ಯವಾದಗಳನ್ನು ಹೇಳಿದ್ದಾರೆ.
ಸಮಸ್ತ ಸರ್ಕಾರಿ ನೌಕರರ ಪರವಾಗಿ ರಾಜ್ಯ ಸರ್ಕಾರಿ ನೌಕರರ ಸಂಘಟನೆಯಿಂದ ಈ ಒಂದು 7ನೇ ವೇತನ ಆಯೋಗವನ್ನು ನೌಕರರಿಗೆ ನೀಡಿದ್ದಕ್ಕಾಗಿ ಧನ್ಯವಾದಗಳೆಂದು ಹೇಳಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..