ರಾಜ್ಯ ಅನ್ ಲಾಕ್ – ರಾಜ್ಯಾದ್ಯಂತ ಮೂರನೇ ಅಲೆ ತಡೆಗೆ ಮಾರ್ಗ ಸೂಚಿ ಪ್ರಕಟ ಸೋಮವಾರದಿಂದ ರಾಜ್ಯದಲ್ಲಿ ಏನೇನಿರುತ್ತದೆ ಏನೇನು ಇರೋದಿಲ್ಲ ಕಂಪ್ಲೀಟ್ ಮಾಹಿತಿ

Suddi Sante Desk

ಬೆಂಗಳೂರು –

ಕರೋನಾ ದಿಂದಾಗಿ ಲಾಕ್ ಆಗಿದ್ದ ರಾಜ್ಯವನ್ನು ಮತ್ತಷ್ಟು ರಿಲೀಸ್ ಮಾಡಲಾಗಿದೆ. ಹೌದು ಇಂದು ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರಾಜ್ಯಾಧ್ಯಂತ ಸೋಮವಾರ ದಿಂದ 3.0 ಮಾರ್ಗ ಸೂಚಿಗಳನ್ನು ಬಿಡುಗಡೆ ಮಾಡಿ ರಾಜ್ಯವನ್ನು ಮತ್ತಷ್ಟು ಅನ್ ಲಾಕ್ ಮಾಡಲಾಗಿದೆ.ಸರ್ಕಾರಕ್ಕೆ ನಿಯಂತ್ರಣ ತಾಂತ್ರಿಕ ಸಲಹಾ ಸಮಿತಿ ನೀಡಿದ ಸಲಹೆಗಳನ್ನು ಗಮನಿಸಿ ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳು ಹಾಗೂ ಹಿರಿಯ ಅಧಿಕಾರಿ ಗಳೊಂದಿಗೆ ಚರ್ಚಿಸಿ ಮಾನ್ಯ ಮುಖ್ಯಮಂತ್ರಿಗಳು 05-07-2021 ರಂದು ಬೆಳಿಗ್ಗೆ 5 ಗಂಟೆಯಿಂದ 19-07-2021 ಬೆಳಿಗ್ಗೆ 5.00 ಗಂಟೆಯವರೆಗೆ ಜಾರಿಗೆ ಬರುವಂತೆ ಈ ಕೆಳ ಕಾಣಿಸಿದ ಸಡಿಲಿಕೆಗಳು ನಿರ್ಬಂಧಗಳನ್ನು ರಾಜ್ಯದಲ್ಲಿ ಜಾರಿಗೊಳಿಸಿದ್ದಾರೆ.

ಯಾವುದಕ್ಕೆ ಅವಕಾಶ ನೀಡಲಾಗಿದೆ.

ಸರ್ಕಾರಿ/ಖಾಸಗಿ ಕಛೇರಿಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ. 100 ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.
ಮಾಲ್ ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.
ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ಶೇ. 100 ರಷ್ಟು ಪ್ರಮಾಣಿಕರೊಂದಿಗೆ ಸಂಚರಿಸಲು ಅವಕಾಶ ನೀಡಲಾಗಿದೆ.
ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಮಾತ್ರ ಅವಕಾಶವನ್ನು ನೀಡಲಾಗಿದೆ.
ಮದುವೆ ಹಾಗೂ ಇನ್ನಿತರೆ ಕೌಟುಂಬಿಕ ಶುಭ ಸಮಾರಂಭಗಳಿಗೆ 100 ಜನರೊಂದಿಗೆ ಭಾಗವಹಿಸಲು ಅವಕಾಶವನ್ನು ನೀಡಲಾಗಿದೆ.
ಈಜುಕೊಳಗಳಲ್ಲಿ ಕ್ರೀಡಾಪಟುಗಳಿಗೆ ಮಾತ್ರ ಅಭ್ಯಾಸ ಮಾಡಲು ಅವಕಾಶವನ್ನು ನೀಡಲಾಗಿದೆ.
ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಮಾತ್ರ ಅವಕಾಶವನ್ನು ನೀಡಲಾಗಿದೆ.
ಅಂತ್ಯ ಸಂಸ್ಕಾರಕ್ಕೆ 20 ಸದಸ್ಯರು ಭಾಗವಹಿಸಲು ಅವಕಾಶ ನೀಡಲಾಗಿದೆ.
ಕೊರೋನಾ ರಾತ್ರಿ ಕರ್ಫ್ಯೂ ರಾತ್ರಿ 9.00 ರಿಂದ ಬೆಳಿಗ್ಗೆ 5.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುವುದಿಲ್ಲ.
ನಿರ್ಭಂಧ

ಸಾಮಾಜಿಕ, ಧಾರ್ಮಿಕ, ಮತ್ತು ರಾಜಕೀಯ ಸಭೆ ಸಮಾರಂಭಗಳಿಗೆ, ಪ್ರತಿಭಟನೆಗಳಿಗೆ ಹಾಗೂ ಇತರೆ ಸಮಾರಂಭಗಳಿಗೆ ಅವಕಾಶವಿಲ್ಲ.
ಶೈಕ್ಷಣಿಕ ಸಂಸ್ಥೆಗಳನ್ನು ತೆರೆಯುವ ಬಗ್ಗೆ ಪ್ರತ್ಯೇಕವಾಗಿ ತೀರ್ಮಾನಿಸಲಾಗುವುದು.
ಪಬ್ ಗಳು ಕಾರ್ಯನಿರ್ವಹಿಸಲು ಅವಕಾಶವಿಲ್ಲ. ಬಾರ್ ಗಳು ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ (ರಾತ್ರಿ 9 ಘಂಟೆಯವರೆಗೆ ಮಾತ್ರ )
ಚಿತ್ರಮಂದಿರಗಳು ಕಾರ್ಯನಿರ್ವಹಣೆಗೆ ಅವಕಾಶವಿಲ್ಲ.
ಜಿಲ್ಲೆಯಲ್ಲಿರುವ ಪರಿಸ್ಥಿತಿಗನುಗುಣವಾಗಿ ಆಯಾಯ ಜಿಲ್ಲೆಯ ಜಿಲ್ಲಾಡಳಿತಗಳು ಇನ್ನೂ ಹೆಚ್ಚಿನ ನಿರ್ಬಂಧಗಳು ಅವಶ್ಯವಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ತೀರ್ಮಾನ ತೆಗೆದುಕೊಳ್ಳಲು ಸೂಚಿಸಿದೆ.
ಕೋವಿಡ್-19 ನಿಯಂತ್ರಿಸುವ ದೃಷ್ಟಿಯಿಂದ ಸಾರ್ವಜನಿಕರು ನಿಯಂತ್ರಣ ಕ್ರಮಗಳಾದ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ವೈಯಕ್ತಿಕ ಮತ್ತು ಸಾಮಾಜಿಕ ಸ್ವಚ್ಛತೆ ಕಡೆಗೆ ಗಮನ ಹರಿಸಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಲು ವಿನಂತಿಯನ್ನು ಮುಖ್ಯಮಂತ್ರಿ ಮತ್ತು ಸಚಿವ ಸಂಪುಟದ ಸರ್ವ ಸದಸ್ಯರು ಸಾರ್ವಜನಿಕರಲ್ಲಿ ಮಾಡಿಕೊಂಡಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.