ಹುಬ್ಬಳ್ಳಿ –
ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬಾಳ್ಕರ್ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ.

ಪೊಲೀಸ್ ಇಲಾಖೆಯಿಂದ ನಿಯೋಜನೆಗೊಂಡ ಅಂಗ ರಕ್ಷಕನನ್ನು ಮನೆಗೆಲಸದವರಂತೆ ಬಳಕೆ ಮಾಡಿಕೊಳ್ಳುತ್ತಿರುವದು ಬಹಿರಂಗಗೊಂಡಿದೆ.

ಹೌದು. ನಗರದಲ್ಲಿ ಖಾಸಗಿ ಹೋಟೆಲ್ ನಲ್ಲಿ ನಡೆದ ಸಂಕಲ್ಪ ಸಮಾವೇಶದಲ್ಲಿ ಭಾಗಿಯಾಗಿದ್ದ ಶಾಸಕಿ ಗನ್ ಮ್ಯಾನ್ ಕೈಯಲ್ಲಿ ವ್ಯಾನಿಟಿ ಬ್ಯಾಗ್ ನೀಡಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಶಾಸಕಿಯೊಬ್ಬರು ಪೊಲೀಸ್ ಇಲಾಖೆಗೆ ಸೇರಿದ ಗನ್ ಮ್ಯಾನ್ ಕೈಯಲ್ಲಿ ಮಹಿಳೆಯಾಗಿ ವ್ಯಾನಿಟಿ ಬ್ಯಾಗ್ ನೀಡಿ ಸಾರ್ವಜನಿಕ ಸ್ಥಳದಲ್ಲಿ ಓಡಾಡುವ ದೃಶ್ಯ ಸಾರ್ವಜನಿಕರ ಟೀಕೆಗೆ ಗುರಿಯಾಗಿದೆ.
ಈಹಿಂದೆಯೂ ಕೂಡ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಮೇಲೆ ಆರೋಪಗಳು ಕೇಳಿಬಂದಿದ್ದವು. ಈಗ ಹುಬ್ಬಳ್ಳಿ ಸಮಾವೇಶದಲ್ಲಿ ಇವರ ವರ್ತನೆಗೆ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.