ಮಂಡ್ಯ –
ಆಯ್ಕೆ ಮಾಡಿ ಟಿಕೆಟ್ ನೀಡಿದ ಕಾಂಗ್ರೆಸ್ ವರಿಷ್ಠರಿಗೆ ಆಭಾರಿ ಎಂದರು ವೆಂಕಟರಮಣೇ ಗೌಡ ಸ್ಟಾರ್ ಚಂದ್ರು – ಕ್ಷೇತ್ರದಲ್ಲಿ ಈ ಬಾರಿ ಸ್ಟಾರ್ ಚಂದ್ರು ಅವರ ಸ್ಟಾರ್ ಬದಲಾಯಿಸಲಿದ್ದಾರೆ ಕ್ಷೇತ್ರದ ಜನತೆ ಹೌದು
ಮಂಡ್ಯ ಜಿಲ್ಲಾ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರದ ಶಾಸಕರು, ಎಲ್ಲ ಬ್ಲಾಕ್ ಕಾಂಗ್ರೆಸ್‌ನ ಅಧ್ಯಕ್ಷರುಗಳು, ಜಿಲ್ಲಾ ಕಾಂಗ್ರೆಸ್ ಸಮಿತಿಯ ವರು ಒಕ್ಕೊರಲಿನಿಂದ ನನ್ನನ್ನು ಅಭ್ಯರ್ಥಿಯ ನ್ನಾಗಿ ಮಾಡಲು ಕೆಪಿಸಿಸಿಗೆ ಶಿಫಾರಸು ಮಾಡಿ ದ್ದರು.
ಹಾಗಾಗಿ ಇಂದು ನನ್ನನ್ನು ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿ ದ್ದಾರೆ. ಇದಕ್ಕೆ ನಾನು ಆಭಾರಿಯಾಗಿದ್ದೇನೆ. ಆಯ್ಕೆ ಮಾಡಿದ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವ ಕುಮಾರ್ ಅವರಿಗೆ, ಮುಖ್ಯಮಂತ್ರಿ ಸಿದ್ದರಾ ಮಯ್ಯ ಅವರಿಗೆ, ಜಿಲ್ಲಾ ಉಸ್ತುವಾರಿ ಸಚಿವ ರಾದ ಚಲುವರಾಯಸ್ವಾಮಿ ಅವರಿಗೆ ಮತ್ತು ಮಂಡ್ಯ ಜಿಲ್ಲೆಯ ಜನತೆಗೆ ಕೃತಜ್ಞತೆಯನ್ನು ಸ್ಟಾರ್ ಚಂದ್ರು ಅವರು ಹೇಳಿದ್ದಾರೆ
ಟಿಕೆಟ್ ಘೋಷಣೆ ಬೆನ್ನಲ್ಲೇ ಈ ಒಂದು ವಿಚಾರ ಕುರಿತು ಹೈ ಕಮಾಂಡ್ ಗೆ ಧನ್ಯವಾದಗಳನ್ನು ಸಲ್ಲಿ ಸಿದ್ದಾರೆ.ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಹೇಗೆ ಮತದಾರರು ಕಾಂಗ್ರೆಸ್ ಪಕ್ಷವನ್ನು ಕೈಹಿಡಿದರೋ, ಹಾಗೆಯೇ ಈಗ ಸಂಸತ್ ಚುನಾವಣೆಯಲ್ಲಿಯೂ ನನ್ನನ್ನು ಆಯ್ಕೆ ಮಾಡಲಿದ್ದಾರೆ ಎಂಬ ಭರವಸೆ ನನಗಿದೆ ಎಂದಿದ್ದಾರೆ
ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆ ಇದೆ. ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳೇ ನನಗೆ ಶ್ರೀರಕ್ಷೆಯಾಗಿದೆ ಎಂಬ ಭರವಸೆ ಯ ಗೆಲುವಿನ ಮಾತುಗಳನ್ನು ಹೇಳಿದ್ದಾರೆ
ಸುದ್ದಿ ಸಂತೆ ನ್ಯೂಸ್ ಮಂಡ್ಯ…..





















