ಹುಬ್ಬಳ್ಳಿ –
ಹಿರಿಯ ಪತ್ರಕರ್ತ ಮೋಹನ ಹೆಗಡೆ ಅವರು ಸಂಯುಕ್ತ ಕರ್ನಾಟಕ ಪತ್ರಿಕೆಯ ಕಾರ್ಯ ನಿರ್ವಾಹಕ ಸಂಪಾದಕರಾಗಿ ಹಾಗೂ ಹುಬ್ಬಳ್ಳಿ ವಿಭಾಗದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಕಳೆದ 9 ವರುಷಗಳಿಂದ ವಿಜಯವಾಣಿಯ ಹುಬ್ಬಳ್ಳಿಯ ಸ್ಥಾನಿಕ ಸಂಪಾದಕರಾಗಿ ಕಾರ್ಯನಿರ್ವಹಿಸಿ ಈಗಷ್ಟೇ ಅಲ್ಲಿಂದ ಮತ್ತೆ ಈ ಹಿಂದೆ 28 ವರುಷಗಳ ಕಾಲ ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಸ್ಥಳೀಯ ಸಂಪಾದಕರಾಗಿ ಕೆಲಸ ಮಾಡಿದ್ದರು. ಈಗ ಮತ್ತೇ ಅದೇ ಪತ್ರಿಕೆಗೆ ದೊಡ್ಡ ಹುದ್ದೆಯ ಅಧಿಕಾರವನ್ನು ವಹಿಸಿಕೊಂಡಿದ್ದಾರೆ ಇನ್ನೂ ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆ ಪತ್ರಿಕೆಯ ಎಲ್ಲಾ ಸಹೋದ್ಯೋಗಿಗಳು ಅಭಿನಂದಿಸಿದರು.