ಹುಬ್ಬಳ್ಳಿ –
ರಾಜ್ಯದಲ್ಲಿ ಶಾಲೆಗಳಿಗೆ ಈ ಕೂಡಲೇ 1 ತಿಂಗಳು ದಸರಾ ರಜೆಯನ್ನು ವಿಸ್ತರಣೆ ಮಾಡುವಂತೆ ಒತ್ತಾಯಿಸಿ ರಾಜ್ಯ ಸರ್ಕಾರಕ್ಕೆ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಪತ್ರವನ್ನು ಬರೆದಿ ದ್ದಾರೆ.ಹೌದು ದಸರಾಕ್ಕೆ ಶಾಲೆಗಳಿಗೆ ನೀಡುವ ಒಂದು ತಿಂಗಳ ರಜೆಯನ್ನು 15 ದಿನಕ್ಕೆ ಸೀಮಿತ ಗೊಳಿಸಿರುವ ಸರ್ಕಾರದ ನಡೆಗೆ ಅಸಮಾಧಾನ ದೊಂದಿಗೆ ಬೇಸರವನ್ನು ವ್ಯಕ್ತಪಡಿಸಿ ಪತ್ರವನ್ನು ಬರೆದಿದ್ದಾರೆ.
ಈ ಕುರಿತು ಶಿಕ್ಷಣ ಸಚಿವರು ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಬಸವರಾಜ ಹೊರಟ್ಟಿ ಪತ್ರ ಬರೆ ದಿದ್ದು ದಸರಾಗೆ ಈ ಮುಂಚೆ ಒಂದು ತಿಂಗಳು ರಜೆ ಕೊಡಲಾಗುತ್ತಿತ್ತು ಹಾಗೇ ಎರಡು ತಿಂಗಳ ಬೇಸಿಗೆ ರಜೆ ನೀಡಲಾಗುತ್ತಿತ್ತು ಆದ್ರೆ ಈ ಬಾರಿ ಕೇವಲ 15 ದಿನ ರಜೆ ನೀಡಿರೋದು ಸರಿಯಲ್ಲ ದಸರಾ ಮತ್ತು ದೀಪಾವಳಿ ಹಬ್ಬ ಎರಡೂ ಒಂದೇ ತಿಂಗಳಲ್ಲಿ ಬಂದಿವೆ ಹೀಗಾಗಿ ಈ ಎರಡೂ ಹಬ್ಬ ಮುಗಿಯೋ ವರೆಗೆ ರಜೆ ಕೊಡಬೇಕಾಗಿತ್ತು ಎಂದು ಆಗ್ರಹಿ ಸಿದ್ದಾರೆ.
ಕೇವಲ 15 ದಿನಗಳ ರಜೆಯಿಂದ ಮಕ್ಕಳಿಗೆ ತೊಂದರೆಯಾಗುತ್ತದೆ ಮಕ್ಕಳಿಗೆ ಶಾಲೆಯ ಪಾಠ ಗಳ ಜೊತೆಗೆ ಮನೆಯಲ್ಲಿನ ವಾತಾವರಣವು ಅಷ್ಟೇ ಮುಖ್ಯ ಮಕ್ಕಳು ಮಾನಸಿಕ ಒತ್ತಡಕ್ಕೆ ಒಳಗಾಗುತ್ತಾರೆ. ಹೀಗಾಗಿ ಒಂದು ತಿಂಗಳಿಗೆ ರಜೆ ವಿಸ್ತರಣೆ ಮಾಡಬೇಕೆಂದು ಪತ್ರದ ಮೂಲಕ ತಾಕೀತು ಮಾಡಿದ್ದಾರೆ.