This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

State News

ವಿಧಾನ ಪರಿಷತ್ ನೈರುತ್ಯ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರಕ್ಕೆ ಚುನಾವಣೆ ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ 1174 ಹಾಗೂ ಪದವೀಧರ ಕ್ಷೇತ್ರದಲ್ಲಿ 3616 ಮತದಾರರು…..

WhatsApp Group Join Now
Telegram Group Join Now

ಬೆಂಗಳೂರು

ವಿಧಾನ ಪರಿಷತ್ ನೈರುತ್ಯ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರಕ್ಕೆ ಚುನಾವಣೆ
ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ 1174 ಹಾಗೂ ಪದವೀಧರ ಕ್ಷೇತ್ರದಲ್ಲಿ 3616 ಮತದಾರರು ಹೌದು 2024 ರ ಜೂನ್, 21 ಕ್ಕೆ ಅವಧಿ ಪೂರ್ಣ ಗೊಳ್ಳಲಿರುವ ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಸಲು ಸಿದ್ಧತೆ ನಡೆದಿದ್ದು,

ಆ ನಿಟ್ಟಿನಲ್ಲಿ ಇದುವರೆಗೆ ಹೆಸರು ನೋಂದಾಯಿ ಸಿರುವ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.ನಗರದ ಸುದ್ದಿಗೋ ಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಚುನಾವಣಾ ಆಯೋಗದ ನಿರ್ದೇಶನದಂತೆ ಈಗಾಗಲೇ ನವೆಂಬರ್, 23 ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು,

ನವೆಂಬರ್, 23 ರಿಂದ ಡಿಸೆಂಬರ್, 09 ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲಾಗಿದೆ. ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಮೂನೆ-18 ಮತ್ತು 19 ರ ಅರ್ಜಿಗಳನ್ನು ಸ್ವೀಕರಿಸಲಾಗಿದ್ದು ನಿಯಮಾನು ಸಾರ ಪರಿಶೀಲಿಸಿ ವಿಲೇವಾರಿ ಮಾಡಲಾಗಿದೆ ಎಂದರು ಈ ಅವಧಿಯಲ್ಲಿ (ನವೆಂಬರ್, 23 ರಿಂದ ಡಿಸೆಂಬರ್, 09 ರವರೆಗೆ) ಕೊಡಗು ಜಿಲ್ಲೆ ಯಲ್ಲಿ ಒಟ್ಟು 245 ಮಂದಿಯ ಅರ್ಜಿ ಸ್ವೀಕರಿ ಸಿದ್ದು, 199 ಅರ್ಜಿಗಳನ್ನು ಅಂಗೀಕರಿಸಲಾಗಿದೆ.

15 ಅರ್ಜಿಗಳು ತಿರಸ್ಕøತಗೊಂಡಿದ್ದು, 31 ಅರ್ಜಿಗಳನ್ನು ನೈರುತ್ಯ ಶಿಕ್ಷಕರ ಕ್ಷೇತ್ರದ ವ್ಯಾಪ್ತಿಗೆ ವರ್ಗಾಯಿಸಲಾಗಿದೆ ಎಂದು ಮಾಹಿತಿ ನೀಡಿ ದರು.ಹಾಗೆಯೇ ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಈ ಅವದಿಯಲ್ಲಿ (ನವೆಂಬರ್, 23 ರಿಂದ ಡಿಸೆಂಬರ್, 09 ರವರೆಗೆ) 707 ಅರ್ಜಿ ಗಳನ್ನು ಸ್ವೀಕರಿಸಲಾಗಿದ್ದು

616 ಅರ್ಜಿಗಳು ಅಂಗೀಕಾರವಾಗಿದೆ. 28 ಅರ್ಜಿಗಳು ತಿರಸ್ಕøತಗೊಂಡಿದ್ದು, 63 ಅರ್ಜಿ ಗಳನ್ನು ಬೇರೆ ಕ್ಷೇತ್ರಕ್ಕೆ ವರ್ಗಾಯಿಸಲಾಗಿದೆ ಎಂದು ಮಾಹಿತಿ ನೀಡಿದರು.ನಮೂನೆ-18 ಮತ್ತು ನಮೂನೆ-19ರ ಅರ್ಜಿಗಳನ್ನು ನಿಯಮಾನು ಸಾರ ಪರಿಶೀಲಿಸಿ ಡಾಟಾ ಎಂಟ್ರಿ ಮಾಡಿದ್ದು, ಭಾರತ ಚುನಾವಣಾ ಆಯೋಗದ ವೇಳಾಪ ಟ್ಟಿಯ ಅನುಸಾರ ಶನಿವಾರ (ಡಿಸೆಂಬರ್, 30, 2023 ರಂದು) ಅಂತಿಮ ಮತದಾರರ ಪಟ್ಟಿ ಯನ್ನು ಜಿಲ್ಲಾಧಿಕಾರಿ,

ಉಪ ವಿಭಾಗಾಧಿಕಾರಿ ಹಾಗೂ ತಹಶೀಲ್ದಾರರ ಕಚೇರಿಯಲ್ಲಿ ಪ್ರಕಟಿಸಲಾಗಿದೆ ಎಂದು ಜಿಲ್ಲಾ ಧಿಕಾರಿ ವೆಂಕಟ್ ರಾಜಾ ಅವರು ವಿವರಿಸಿದರು. ಒಟ್ಟಾರೆ ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿ ದಂತೆ ಜಿಲ್ಲೆಯಲ್ಲಿ ಒಟ್ಟು ಇದುವರೆಗೆ 1174 ಮಂದಿ ಮತದಾರರು ಇದ್ದು, ಇವರಲ್ಲಿ 392 ಪುರುಷ ಮತದಾರರು, 782 ಮಹಿಳಾ ಮತ ದಾರರು ಇದ್ದಾರೆ. ತಾಲ್ಲೂಕುವಾರು ಗಮನಿಸಿ ದಾಗ ಮಡಿಕೇರಿ 391, ಸೋಮವಾರಪೇಟೆ 124, ವಿರಾಜಪೇಟೆ 175, ಕುಶಾಲನಗರ 244 ಮತ್ತು ಪೊನ್ನಂಪೇಟೆ 240 ಮತದಾರರು ಇದ್ದಾರೆ.

ಹಾಗೆಯೇ ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಒಟ್ಟು 3616 ಮತದಾರರು ಇದ್ದು, 1549 ಪುರುಷ ಮತದಾರರು, 2066 ಮಹಿಳಾ ಮತದಾರರು ಇದ್ದಾರೆ. ಇತರೆ ಒಬ್ಬರು ಮತದಾರರು ಇದ್ದಾರೆ. ತಾಲ್ಲೂಕುವಾರು ಗಮನಿ ಸಿದಾಗ ಮಡಿಕೇರಿ 1100, ಸೋಮವಾರಪೇಟೆ 732, ವಿರಾಜಪೇಟೆ 580, ಕುಶಾಲನಗರ 713, ಪೊನ್ನಂಪೇಟೆ 491 ಮಂದಿ ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.

ಮತದಾರರ ಪಟ್ಟಿಯಲ್ಲಿ ಇನ್ನು ಹೆಸರು ನೋಂ ದಾಯಿಸದೆ ಇರುವವರು ನಿರಂತರ ಪರಿಷ್ಕರಣೆ ಅವಧಿಯಲ್ಲಿ ನಮೂನೆ-18 ಮತ್ತು ನಮೂನೆ-19 ರ ಅರ್ಜಿಗಳನ್ನು ಸಲ್ಲಿಸಿ, ನೋಂದಾಯಿಸಿ ಕೊಳ್ಳ ಬಹುದಾಗಿದೆ ಎಂದರು.ಹೆಚ್ಚಿನ ಮಾಹಿತಿಗೆ ಜಿಲ್ಲಾಧಿಕಾರಿಗಳ,

ಉಪ ವಿಭಾಗಾಧಿಕಾರಿಗಳ ಮತ್ತು ಸಂಬಂಧಪಟ್ಟ ತಾಲ್ಲೂಕು ಕಚೇರಿಗಳನ್ನು ಸಂಪರ್ಕಿಸಬಹುದು. ವೆಬ್ ಸೈಟ್ ನಲ್ಲಿಯೂ ಮಾಹಿತಿ ಲಭ್ಯವಿದ್ದು, ಮಾಹಿತಿಯನ್ನು ಪಡೆಯಬಹುದು ಎಂದು ವೆಂಕಟ್ ರಾಜಾ ಅವರು ತಿಳಿಸಿದರು.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk