This is the title of the web page
This is the title of the web page

Live Stream

[ytplayer id=’1198′]

June 2025
T F S S M T W
 1234
567891011
12131415161718
19202122232425
2627282930  

| Latest Version 8.0.1 |

State News

ಏಪ್ರಿಲ್ 18 ಕ್ಕೆ ವಿನಯ ಕುಲಕರ್ಣಿ ಭವಿಷ್ಯ ನಿರ್ಧಾರ – ಪೂರ್ಣಗೊಂಡ ಅರ್ಜಿ ವಿಚಾರಣೆ……

ಏಪ್ರಿಲ್ 18 ಕ್ಕೆ ವಿನಯ ಕುಲಕರ್ಣಿ ಭವಿಷ್ಯ ನಿರ್ಧಾರ – ಪೂರ್ಣಗೊಂಡ ಅರ್ಜಿ ವಿಚಾರಣೆ……
WhatsApp Group Join Now
Telegram Group Join Now

ಬೆಂಗಳೂರು

ಧಾರವಾಡ ಜಿಲ್ಲೆಗೆ ಪ್ರವೇಶ ಕೋರಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸಂಪೂರ್ಣವಾಗಿ ಮುಕ್ತಾಯವಾಗಿದ್ದು ನ್ಯಾಯಾ ಲಯ ಅಂತಿಮ ಆದೇಶವನ್ನು ಕಾಯ್ದಿರಿಸಿದೆ ಹೌದು ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣ ಸಂಬಂಧ ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಅಂತ್ಯಗೊಂಡಿದೆ.

ಅರ್ಜಿ ವಿಚಾರಣೆ ನಡೆಸುತ್ತಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಏಪ್ರಿಲ್‌ 18ಕ್ಕೆ ಅಂತಿಮವಾಗಿ ಆದೇಶ ಕಾಯ್ದಿರಿಸಿದೆ. ಚುನಾವಣೆ ಹಿನ್ನೆಲೆ ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ ವಿನಯ್ ಕುಲಕರ್ಣಿ ಅರ್ಜಿ ಸಲ್ಲಿಸಿದ್ದರು.ಅದರಂತೆ ಕೋರ್ಟ್ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ವೇಳೆ ವಾದ ಮಂಡಿಸಿದ ಕುಲಕರ್ಣಿ ಪರ ವಕೀಲರಾದ ಸಿ ಹೆಚ್ ಹನುಮಂ ತರಾಯ ಚುನಾವಣೆಗೆ ನಾಮಪತ್ರ ಸಲ್ಲಿಸಿ ಪ್ರಚಾರ ನಡೆಸಬೇಕಿದೆ.

ಹೀಗಾಗಿ ಧಾರವಾಡ ಜಿಲ್ಲಾ ಪ್ರವೇಶಕ್ಕೆ ಅನುಮತಿ ನೀಡುವಂತೆ ಕೋರಿದ್ದರು.ವಿಚಾರಣೆ ವೇಳೆ ಪ್ರತಿ ವಾದ ಮಂಡಿಸಿದ ಸಿಬಿಐ ಪರ ವಕೀಲರು, ಯೋಗೇಶ್ ಗೌಡ ಕೊಲೆ ಪ್ರಕರಣದ 90 ಸಾಕ್ಷಿಗಳು ಧಾರವಾಡ ಜಿಲ್ಲೆಯಲ್ಲೇ ಇದ್ದಾರೆ ಎಂಬುದನ್ನು ಕೋರ್ಟ್​ ಗಮನಕ್ಕೆ ತಂದರು.

ಅಲ್ಲದೆ ಸೂಚಕರ ಮೂಲಕವೇ ನಾಮಪತ್ರ ಸಲ್ಲಿಸುವ ಅವಕಾಶ ಇದೆ ಅಂತ ಹೇಳಿದರು. ವಾದ ಪ್ರತಿವಾದ ಆಲಿಸಿದ ಕೋರ್ಟ್ ವಿಚಾರಣೆ ಯನ್ನು ಮುಂದೂಡಿತ್ತು ಅದರಂತೆ ಮತ್ತೆ ವಿಚಾರಣೆಯನ್ನು ಕೋರ್ಟ್ ಅಂತ್ಯಗೊಳಿಸಿದ್ದು ವಿನಯ್ ಕುಲಕರ್ಣಿಗೆ ಧಾರವಾಡ ಪ್ರವೇಶ ಸಿಗುತ್ತಾ ಎಂಬುದನ್ನು ಕಾದುನೋಡಬೇಕಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk