ಧಾರವಾಡ –
ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್‍ಗೌಡ ಹತ್ಯೆ ಪ್ರಕರಣ ಸಂಬಂಧ ಮಾಜಿ ಸಚಿವ ವಿನಯ್ ಕುಲಕರ್ಣಿ ಮೇಲಿನ ಸಾಕ್ಷ್ಯ ನಾಶ ಕೇಸ್ ವಿಚಾರಣೆಯನ್ನು ಧಾರವಾಡದ ಜೆಎಂಎಫ್‍ಸಿ ಕೋರ್ಟ್ ಮತ್ತೆ ಮುಂದೂಡಿದೆ.

ಸಿಬಿಐ ಕೇಸ್ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆಯಾದ ಹಿನ್ನೆಲೆ ಈ ಕೇಸ್ ಸಹ ಅದೇ ಕೋರ್ಟ್‍ಗೆ ವರ್ಗಾಯಿಸುವಂತೆ ವಿನಯ್ ಕುಲಕರ್ಣಿ ಪರ ವಕೀಲರು ನ್ಯಾಯಾಲಯಕ್ಕೆ ಕೋರಿದ ಹಿನ್ನೆಲೆಯಲ್ಲಿ ನ್ಯಾಯಾಧೀಶರು ವಿಚಾರಣೆಯನ್ನು ಮುಂದೂಡಿದರು.

.
ಸಿಬಿಐನಿಂದ ಸಾಕ್ಷ್ಯ ನಾಶದ ಪ್ರತ್ಯೇಕ ದೂರು ಸಲ್ಲಿಕೆಯಾಗಿತ್ತು. ಸಿಬಿಐ ದೂರು ಆಧರಿಸಿ ಜೆಎಂಎಫ್‍ಸಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ವಿನಯ್ ಸೇರಿ 8 ಜನರನ್ನು ಆರೋಪಿಗಳೆಂದು ಪರಿಗಣಿಸಲಾಗಿತ್ತು.

ವಿನಯ್ ಕುಲಕರ್ಣಿ ಪ್ರಕರಣದ ಮೊದಲ ಆರೋಪಿಯಾಗಿದ್ದು, ಯೋಗೇಶ್ ಗೌಡ ಕೊಲೆ ಬಳಿಕ ಸಾಕ್ಷ್ಯ ನಾಶ ಮಾಡುವ ಯತ್ನ ನಡೆದಿತ್ತು ಎನ್ನಲಾಗಿದೆ.