ಧಾರವಾಡ – ಅಕ್ರಮ ಶಸ್ತ್ರಾಸ್ತ್ರ ಸಾಗಟ ಆರೋಪದ ಮೇಲೆ ಸಿಬಿಐನಿಂದ ಬಂಧನಕ್ಕೆ ಒಳಗಾಗಿರುವ ವಿನಯ ಕುಲಕರ್ಣಿ ಸೋದರ ಮಾವನಿಗೆ ಮತ್ತೆ ನ್ಯಾಯಾಂಗ ಬಂಧನವಾಗಿದೆ.
ಎರಡು ದಿನಗಳ ಸಿಬಿಐ ಕಸ್ಟಡಿಗೆಯಲ್ಲಿದ್ದ ಚಂದ್ರಶೇಖರ ಇಂಡಿಯವರನ್ನು ಕಸ್ಟಡಿ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಯಿತು.
ಧಾರವಾಡ ಉಪನಗರ ಠಾಣೆಯಿಂದ ಬಿಗಿ ಪೊಲೀಸ್ ಭದ್ರತೆ ಯಲ್ಲಿ ಧಾರವಾಡ ಜಿಲ್ಲಾ ನ್ಯಾಯಾಲಯ ಸಂಕಿರ್ಣ ಆವರಣಕ್ಕೆ ಕರೆತರಲಾಯಿತು. ಬಳಿಕ ಅವರನ್ನು ಮೂರನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಯಿತು.
ಬಳಿಕ ವಿಚಾರಣೆ ಮಾಡಿದ ಮೂರನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರು ಡಿಸೆಂಬರ್ 19 ಕ್ಕೆ ಕುಟುಂಬಸ್ಥರ ಭೇಟಿಗೆ ಅವಕಾಶ ನೀಡಿ. ಡಿಸೆಂಬರ್ 28ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದರು.
ನ್ಯಾಯಾಂಗ ಬಂಧನಕ್ಕೆ ಚಂದ್ರಶೇಖರ ಇಂಡಿಯವರನ್ನು ನೀಡಿದ ಬೆನ್ನಲ್ಲೇ ಸಿಬಿಐ ಅಧಿಕಾರಿಗಳು ಪೊಲೀಸ್ ಬಿಗಿ ಭದ್ರತೆಯಲ್ಲಿ ಧಾರವಾಡ ಕೇಂದ್ರ ಕಾರಾಗ್ರಹಕ್ಕೆ ಇಂಡಿಯವರನ್ನು ಕರೆದುಕೊಂಡು ಹೋದರು.