ಧಾರವಾಡ –
ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಮತ್ತು ಇವರ ಸೋದರ ಮಾವ ಚಂದ್ರಶೇಖರ ಇಂಡಿ ಇವರ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.


ಇವರಿಬ್ಬರ ನ್ಯಾಯಾಂಗ ಬಂಧನದ ಅವಧಿ ಇಂದು ಮುಕ್ತಾಯವಾದ ಹಿನ್ನಲೆಯಲ್ಲಿ ಇಂದು ಧಾರವಾಡದ ವಿಶೇಷ ಸಿಬಿಐ ನ್ಯಾಯಾಲಯದ ನ್ಯಾಯಾವಾದಿಗಳು ವಿಚಾರಣೆ ಮಾಡಿ ನ್ಯಾಯಾಂಗ ಅವಧಿಯನ್ನು ವಿಸ್ತರಣೆ ಮಾಡಿ ಆದೇಶವನ್ನು ಹೊರಡಿಸಿದ್ದಾರೆ. ಜನೆವರಿ 8 ರವರೆಗೆ ಇಬ್ಬರಿಗೂ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಣೆ ಮಾಡಿ ನ್ಯಾಯಾಧೀಶರು ಆದೇಶವನ್ನು ಹೊರಡಿಸಿದ್ದಾರೆ. ಈಗಾಗಲೇ ಇಬ್ಬರು ಸಿಬಿಐ ಬಂಧನಕ್ಕೊಳಗಾಗಿ ನ್ಯಾಯಾಂಗ ಬಂಧನದಲ್ಲಿದ್ದಾರೆ .ಧಾರವಾಡದ ವಿಶೇಷ ಸಿಬಿಐ ನ್ಯಾಯಾಲಯದಲ್ಲಿ ಇಂದು ನಡೆದ ವಿಚಾರಣೆಯಲ್ಲಿ ನ್ಯಾಯಾಧೀಶರು ಅವಧಿಯನ್ನು ವಿಸ್ತರಣೆ ಮಾಡಿ ಆದೇಶವನ್ನು ಹೊರಡಿಸಿದ್ದಾರೆ.ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಇದ್ದಾರೆ. ಇನ್ನೂ ಇತ್ತ ಧಾರವಾಡದ ಕೇಂದ್ರ ಕಾರಾಗೃಹದಲ್ಲಿ ಮಾಜಿ ಸಚಿವ ವಿನಯ ಕುರಕರ್ಣಿ ಸೋದರ ಮಾವ ಚಂದ್ರಶೇಖರ ಇಂಡಿ ಇದ್ದಾರೆ.