ವಿನಯ ಕುಲಕರ್ಣಿ ನ್ಯಾಯಾಂಗ ಅವಧಿ ಅಂತ್ಯ – ನ್ಯಾಯಾಲಯಕ್ಕೆ ಹಾಜರಾದ ಸಿಬಿಐ ಅಧಿಕಾರಿಗಳು

Suddi Sante Desk

ಧಾರವಾಡ –

ಯೊಗೀಶಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಚಿವ ವಿನಯ ಕುಲಕರ್ಣಿ ನ್ಯಾಯಾಂಗ ಬಂಧನದ ಅವಧಿ ಇಂದು ಮುಗಿದಿದೆ. ಈ ಹಿನ್ನಲೆಯಲ್ಲಿ ಧಾರವಾಡದಲ್ಲಿ ಸಿಬಿಐ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರಾದರು. ಅವಧಿ ಮುಗಿದ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರಾಗಿ ಮಾಹಿತಿ ನೀಡಿದರು ‌.

ಇನ್ನೂ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಬೆಳಗಾವಿಯ ಹಿಂಡಲಗಾ ಜೈಲಿನಿಂದ ವಿಡಿಯೋ ಕಾನ್ಪರನ್ಸ್ ಮೂಲಕ ನ್ಯಾಯವಾದಿಗಳು ವಿಚಾರಣೆ ಮಾಡಲಿದ್ದಾರೆ. ವಿಡಿಯೋ ಕಾನ್ಪರನ್ಸ್ ಮೂಲಕ ವಿಚಾರಣೆ ಮಾಡಿದ ನಂತರ ವಿನಯ ಕುಲಕರ್ಣಿ ಯವರನ್ನು ಸಿಬಿಐ ಅಧಿಕಾರಿಗಳು ವಿಚಾರಣೆಗೆ ತಗೆದುಕೊಳ್ಳದಿದ್ದರೆ ನ್ಯಾಯಾಲಯ ಅವರನ್ನು ಮತ್ತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಿದೆ.ಇದನ್ನು ಸಿಬಿಐ ಅಧಿಕಾರಿಗಳು ಕೂಡಾ ನ್ಯಾಯಾಲಯಕ್ಕೆ ಹೇಳಿದ್ದಾರೆ.ಅಲ್ಲದೇ ಬಂಧನದ ಅವಧಿಯ ವಿಸ್ತರಣೆ ಮಾಡುವಂತೆ ಹೇಳಿದ್ದಾರೆ ವಿಚಾರಣೆ ಆರಂಭಗೊಂಡಿದ್ದು ಕೆಲ ಮಹತ್ವದ ದಾಖಲೆಗಳೊಂದಿಗೆ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.