ಧಾರವಾಡ –
ವಿಕೇಂಡ್ ಕರ್ಪ್ಯೂ ಧಾರವಾಡ ಜಿಲ್ಲೆಯಲ್ಲೂ ಕೂಡಾ ಇಂದು ಸಂಜೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆ ಯವರೆಗೆ ಇರಲಿದ್ದು ಈ ಒಂದು ಹಿನ್ನಲೆಯಲ್ಲಿ ಶನಿವಾರ, ರವಿವಾರ ವಾರಾಂತ್ಯ ಕರ್ಫ್ಯೂ ನಲ್ಲಿ ಧಾರವಾಡ ಜಿಲ್ಲೆಯಲ್ಲಿ ಏನೇನು ಇರುತ್ತದೆ ಏನೇನು ಇರೊದಿಲ್ಲ ಈ ಕುರಿತಂತೆ ನೋಡೊದಾದರೆ……………..


ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅಗತ್ಯ ವಸ್ತುಗಳ ಮಾರಾಟಕ್ಕೆ ಅವಕಾಶವನ್ನು ಜಿಲ್ಲೆಯಲ್ಲಿ ನೀಡಲಾಗಿದೆ.
ಇಂದು ಜುಲೈ 2 ಶುಕ್ರವಾರ ಸಂಜೆ 7 ಗಂಟೆಯಿಂದ ಜುಲೈ 5 ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಿಲ್ಲೆಯಾದ್ಯಂತ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿ ರುತ್ತದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.ಜೂನ್ 20 ರಂದು ಹೊರಡಿಸಿದ ಆದೇಶದ ಅನುಬಂಧ (2)ರಲ್ಲಿ ತಿಳಿಸಿರುವಂತೆ ನಾಳೆ ಶನಿವಾರ ಮತ್ತು ಭಾನುವಾರ ಬೆಳಿಗ್ಗೆ 6 ಗಂಟೆ ಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ದಿನಸಿ, ತರಕಾರಿ, ಹಾಲು, ಮಾಂಸಾಹಾರ, ಪ್ರಾಣಿಗಳಿಗೆ ಆಹಾರ ಮತ್ತಿತರ ಅಗತ್ಯವಸ್ತುಗಳು ಮತ್ತು ಮದ್ಯ ಮಾರಾಟಕ್ಕೆ ಅವಕಾಶವಿರುತ್ತದೆ. ಈ ಅವಧಿಯಲ್ಲಿ ಬೀದಿ ಬದಿ ವ್ಯಾಪಾರ ಚಟುವಟಿಕೆ ಗಳು ನಡೆಯಲಿವೆ.ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆ ನಡೆಯಲಿದೆ. ಹೊಟೇಲ್ ಗಳಲ್ಲಿ ಈ ಅವಧಿಯಲ್ಲಿ ಕೇವಲ ಪಾರ್ಸೆಲ್ ಸೇವೆ ನೀಡಬ ಹುದಾಗಿದೆ. ಹೋಂ ಡೆಲೆವರಿ ವಹಿವಾಟುಗಳಿಗೆ ಅವಕಾಶವಿದೆ. ವ್ಯಾಪಾರಿಗಳು ಕೋವಿಡ್-19 ರ ಮಾರ್ಗಸೂಚಿಗಳನ್ನು ಪಾಲಿಸುವುದು ಕಡ್ಡಾಯ ವಾಗಿದೆ.ತುರ್ತು ಸೇವೆ ನೀಡುವ ಚಟುವಟಿಕೆಗಳು ಹಾಗೂ ಕೈಗಾರಿಕೆ ಸಂಸ್ಥೆಗಳ ಕಾರ್ಯಗಳಿಗೆ ಅವಕಾಶವಿರುತ್ತದೆ. ಟೆಲಿಕಾಂ ಮತ್ತು ಅಂತರ್ಜಾಲ ಸೇವೆ ನೀಡುವ ಸಂಸ್ಥೆಗಳ ಅಗತ್ಯ ಸಿಬ್ಬಂದಿ ಮಾತ್ರ ಸಂಚರಿಸಬಹುದು. ಉಳಿದವರು ಮನೆಯಿಂದ ಕೆಲಸ ನಿರ್ವಹಿಸಬೇಕು. ರೋಗಿಗಳ ಆರೈಕೆದಾರರು, ಕೋವಿಡ್ ನಿರೋಧಕ ಲಸಿಕೆ ಹಾಕಿಸಿಕೊಳ್ಳಲು ಅಗತ್ಯ ದಾಖಲೆಗಳೊಂದಿಗೆ ಉದ್ದೇಶಿತ ಕಾರ್ಯಕ್ಕೆ ತೆರಳಬಹುದು. ಬಸ್, ರೈಲು ಹಾಗೂ ವಿಮಾನಗಳ ಸಂಚಾರ ಇರಲಿದೆ.ಕಡಿಮೆ ಸಂಖ್ಯೆಯಲ್ಲಿ ಬಸ್ಗಶಳು ರಸ್ತೆಗಿಳಿಯಲಿವೆ.ಮಧ್ಯಾಹ್ನ 2 ಗಂಟೆಯ ನಂತರ ಅನಗತ್ಯ ವಾಹನ ಸಂಚಾರಕ್ಕೆ ಅವಕಾಶವಿಲ್ಲ. ಈಗಾಗಲೇ ಅನುಮತಿ ಪಡೆದಿರುವ ಮದುವೆ ಸಮಾರಂಭಗಳನ್ನು 40 ಕ್ಕಿಂತ ಹೆಚ್ಚು ಜನರು ಸೇರದೆ ಕಲ್ಯಾಣ ಮಂಪಟ ಹೊಟೇಲ್ ಗಾರ್ಡನ್ ಸೇರಿದಂತೆ ಎಲ್ಲೆಂದರಲ್ಲಿ ಆಯೋಜಿಸಬಹುದು. ಅಂತ್ಯಕ್ರಿಯೆಗಳಲ್ಲಿ ಗರಿಷ್ಠ 5 ಜನ ಮಾತ್ರ ಭಾಗವಹಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.