ಮೈಸೂರು –
ಕೋವಿಡ್ ಸಾಂಕ್ರಾಮಿಕ ಸೋಂಕಿನ ತೀವ್ರತೆ ಕ್ಷೀಣಿಸಿದ ಬಳಿಕ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವುದು ಸ್ವಾಗತಾರ್ಹ.ಆದರೆ ಎಲ್ಲರನ್ನೂ ಉತ್ತೀರ್ಣಗೊಳಿ ಸುವುದು,ಎ, ಬಿ, ಸಿ ಗ್ರೇಡಿಂಗ್ ಕೊಡುವುದು ಅವೈಜ್ಞಾನಿಕ.ಶಿಕ್ಷಣ ಇಲಾಖೆ ತನ್ನ ಈ ನಿರ್ಧಾರವನ್ನು ಪುನರ್ ಪರಿಶೀಲಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಆಗ್ರಹಿಸಿದ್ದಾರೆ.

ಶಿಕ್ಷಣ ಕ್ಷೇತ್ರ ಪ್ರತಿನಿಧಿಸುವ ವಿಧಾನ ಪರಿಷತ್ ಸದಸ್ಯರು,ಶಿಕ್ಷಣ ತಜ್ಞರು,ಇಲಾಖೆಯ ಅಧಿಕಾರಿ ಗಳೊಂದಿಗೆ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊ ಳ್ಳುವಂತೆ ಶಿಕ್ಷಣ ಸಚಿವರಿಗೆ ಮೂರು ಪತ್ರ ಬರೆದಿ ದ್ದರೂ,ಕೂಡಾ ಅದನ್ನು ಪರಿಗಣಿಸದೆ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿದ್ದಾರೆ.ಇದರಿಂದ ಬೇಸರ ವಾಗಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಇನ್ನೂ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸುವ ಮಾನದಂಡವೂ ಅವೈಜ್ಞಾನಿಕವಾಗಿದೆ ಎಂದರು