ಬೆಂಗಳೂರು –
ರಾಜ್ಯದ ಶಾಲಾ ಮಕ್ಕಳ ಶೈಕ್ಷಣಿಕ ಪ್ರವಾಸಕ್ಕೆ ಹೊರಬಿತ್ತು ಹೊಸದೊಂದು ಆದೇಶ – ಪ್ರವಾಸ ಕೈಗೊಳ್ಳುವ ರಾಜ್ಯದ ಶಾಲೆಗಳಿಗೆ ಇಲಾಖೆ ನೀಡಿದ ಷರತ್ತುಗಳೇನು ಗೊತ್ತಾ…..ಹೌದು ಶೈಕ್ಷಣಿಕ ಪ್ರವಾಸವನ್ನು ಕೈಗೊಳ್ಳುವ ರಾಜ್ಯದ ಶಾಲಾ ಮಕ್ಕಳಿಗೆ ಇಲಾಖೆ ಹೊಸದೊಂದು ಆದೇಶವನ್ನು ಮಾಡಿದೆ.ಇತ್ತೀಚಿಗೆ ಸಂಭವಿಸಿದ ಘಟನೆ ಮತ್ತು ಕೆಲ ಪ್ರಮುಖ ವಿಚಾರಗಳನ್ನು ಮುಂದಿಟ್ಟುಕೊಂಡು ಇಲಾಖೆ ಹೊಸದಾಗಿ ಕೆಲವೊಂದಿಷ್ಟು ಷರತ್ತುಗಳನ್ನು ಹಾಕಿ ಆದೇಶ ವನ್ನು ಮಾಡಿದೆ.
ಕರ್ನಾಟಕದ ಶಾಲಾ ಶಿಕ್ಷಣ ಇಲಾಖೆ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸದ ಬಗ್ಗೆ ಸ್ಪಷ್ಟೀಕರಣವನ್ನು ನೀಡಿದೆ.ಹೊರ ರಾಜ್ಯಗಳಿಗೆ,ಭಾರತೀಯ ರೈಲ್ವೆಯಲ್ಲಿ ಸಹ ಪ್ರವಾಸ ಕೈಗೊಳ್ಳಲು ಅನುಮತಿಯನ್ನು ಕೂಡಾ ಮೊದಲ ಬಾರಿಗೆ ನೀಡಲಾಗಿದೆ.ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಈ ಕುರಿತು ಸುತ್ತೋಲೆ ಹೊರಡಿಸಿದ್ದಾರೆ.
ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕೈಗೊಳ್ಳಲು ಅನುಮತಿ ನೀಡುವ ಕುರಿತು ಸ್ಪಷ್ಟೀಕರಣ ಎಂಬ ವಿಷಯವನ್ನು ಒಳಗೊಂಡಿದೆ.ಸುತ್ತೋಲೆಯಲ್ಲಿ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕೈಗೊಳ್ಳಲು ಸುತ್ತೋಲೆ ಹೊರಡಿಸಲಾಗಿದೆ.ಕೆಲವು ಶಾಲೆಯ ವರು ಹೊರ ರಾಜ್ಯಕ್ಕೆ ಶೈಕ್ಷಣಿಕ ಪ್ರವಾಸ ಕೈಗೊ ಳ್ಳಲು ಮನವಿ ಸಲ್ಲಿಸಿರುತ್ತಾರೆ.
ಆದರೆ ದಿನಾಂಕ 14/11/2022ರ ಸುತ್ತೋಲೆ ಯಲ್ಲಿ ಹೊರ ರಾಜ್ಯಕ್ಕೆ ಪವಾಸ ಕೈಗೊಳ್ಳಲು ಅನುಮತಿ ನೀಡುವ ಕುರಿತು ಯಾವುದೇ ನಿರ್ದೇಶನವಿರುವುದಿಲ್ಲ ಆದ್ದರಿಂದ ಈ ಬಗ್ಗೆ ಅನುಮತಿ ನೀಡುವ ಕುರಿತು ಮಾರ್ಗದರ್ಶನ ಕೋರಿರುತ್ತಾರೆ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.
ಪ್ರತಿ ಶೈಕ್ಷಣಿಕ ವರ್ಷ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ದೇಶದಾದ್ಯಂತ ಶೈಕ್ಷಣಿಕ ಪ್ರವಾಸ ಕೈಗೊಳ್ಳಲು ಷರತ್ತುಗಳ ಅನ್ವಯ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಅನುಮತಿ ನೀಡಲು ಸೂಚಿಸಿದೆ ಹಾಗೂ ಸದರಿ ಶೈಕ್ಷಣಿಕ ಪುವಾಸವನ್ನು ಭಾರತೀಯ ರೈಲ್ವೆಯ ರೈಲುಗಳಲ್ಲಿಯೂ ಹಮ್ಮಿಕೊಳ್ಳಬಹುದು ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕೈಗೊಳ್ಳಲು ಅನುಮತಿ ನೀಡುವ ಬಗ್ಗೆ ಈಗಾಗಲೇ ಸುತ್ತೋಲೆ ಹೊರಡಿಸಲಾಗಿದೆ.
ಅಲ್ಲದೇ ಅದರಲ್ಲಿಯೂ ಷರತ್ತುಗಳನ್ನು ಉಲ್ಲೇ ಖಿಸಲಾಗಿದೆ. ಈ ಹಿಂದಿನ ಸುತ್ತೋಲೆಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ಹರಡುವಿ ಕೆಯಿಂದ ದೇಶಾದ್ಯಂತ ಗಂಭೀರ ಪರಿಸ್ಥಿತಿ ಉಂಟಾಗಿದ್ದ ಪ್ರಯುಕ್ತ ಯಾವುದೇ ಶೈಕ್ಷಣಿಕ ಪ್ರವಾಸ ಹಮ್ಮಿಕೊಳ್ಳಬಾರದೆಂದು ಸೂಚಿಸಿ ಲಾಗಿರುತ್ತದೆ.
ಆದರೆ 2022-23ನೇ ಸಾಲಿನ ಶೈಕ್ಷಣಿಕ ವರ್ಷ ದಲ್ಲಿ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕೈಗೊಳ್ಳಲು ಮಾರ್ಗದರ್ಶನ ಮತ್ತು ಅನುಮತಿ ನೀಡಲು ಕೋರಿರುತ್ತಾರೆ.ಅದರಂತೆ ಷರತ್ತುಗಳ ಅನ್ವಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮನವಿಗಳನ್ನು ಪರಿಶೀಲಿಸಿ ಅನುಮತಿ ನೀಡಲು ಸೂಚಿಸ ಲಾಗಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..