ಬೆಂಗಳೂರು –
ರಾಜ್ಯದಲ್ಲಿ ಪಟಾಕಿ ನಿಷೇಧ ಕುರಿತು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಗಡುವು ನೀಡಿದೆ. ಪರಿಸರ ಕಾಳಜಿ ದೃಷ್ಟಿಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಎಲ್ಲ ಬಗೆಯ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವ ಬಗ್ಗೆ 3 ತಿಂಗಳ ಒಳಗೆ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಜನರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಕರೊನಾ ಸೋಂಕು ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಂಪೂರ್ಣವಾಗಿ ಪಟಾಕಿ ನಿಷೇಧಿಸುವಂತೆ ಕೋರಿ ನಗರದ ಚಾರ್ಟರ್ಡ್ ಅಕೌಂಟೆಂಟ್ ಡಾ. ಎ.ಎಸ್. ಭರತ್ ವಿಷ್ಣು ಹಾಗೂ ಸಮರ್ಪಣ ಸ್ವಯಂ ಸೇವಾ ಸಂಸ್ಥೆ ಹೈಕೋರ್ಟ್‌ಗೆ ಪ್ರತ್ಯೇಕ ಪಿಐಎಲ್ ಸಲ್ಲಿಸಿದ್ದವು.

ಈ ಬಗ್ಗೆ ಕುರಿತು ಇಂದು ವಿಚಾರಣೆ ನಡೆಸಿದ ಕೋರ್ಟ್ ಪಟಾಕಿ ಮಾರಾಟ ಹಾಗೂ ಬಳಕೆಯನ್ನು ನ್ಯಾಯಾಲಯ ನಿಷೇಧಿಸಲು ಸಾಧ್ಯವಿಲ್ಲ. ಈ ಬಗ್ಗೆ ಸರ್ಕಾರವೇ 3 ತಿಂಗಳ ಒಳಗೆ ತೀರ್ಮಾನ ಕೈಗೊಳ್ಳಬೇಕು ಎಂದು ತಿಳಿಸಿದೆ

ಇನ್ನೂ ರಾಜ್ಯದಲ್ಲಿ ಪಟಾಕಿಗಳನ್ನು ಉಪಯೋಗಿಸುವ ಮತ್ತು ಬಳಸುವುದರಿಂದ ಶಬ್ದ ಮಾಲಿನ್ಯ, ವಾಯ ಮಾಲಿನ್ಯ ಹೆಚ್ಚಾಗುವ ಜತೆಗೆ, ಜನರಿಗೂ ಗಂಭೀರ ಆರೋಗ್ಯ ಸಮಸ್ಯೆಗಳು ಎದುರಾಗುತ್ತವೆ.ಈ ಬಗ್ಗೆ. ಕೇವಲ ಸರ್ಕಾರವಷ್ಟೇ ಅಲ್ಲದೆ ಸಾರ್ವಜನಿಕರೂ ಈ ವಿಚಾರದಲ್ಲಿ ಜವಾಬ್ದಾರಿಯಿಂದ ವರ್ತಿಸಬೇಕು ಎಂದು ಹೈಕೋರ್ಟ್ ಆದೇಶದಲ್ಲಿ ಹೇಳಿದೆ.