ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ – ಏಪ್ರಿಲ್ 18 ರಂದು ಸರ್ವ ಪಕ್ಷಗಳ ಸಭೆ – ಏನಾಗಲಿದೆ ಸಭೆಯಲ್ಲಿ…..

Suddi Sante Desk

ಬೆಂಗಳೂರು –

ರಾಜ್ಯದಲ್ಲಿ ಕೋವಿಡ್ ದಿನದಿಂದ ದಿನಕ್ಕೆ ಹೆಚ್ಚಾಗು ತ್ತಿದೆ.ಈಗಾಗಲೇ ರಾಜ್ಯದ ಎಂಟು ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ಜಾರಿ ಮಾಡಲಾಗಿದೆ. ಹೀಗಿದ್ದರೂ ಕೂಡಾ ಪರಿಸ್ಥಿತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತು ಲಾಕ್‌ ಡೌನ್ ಘೋಷಣೆ ಕುರಿತು ಚರ್ಚಿಸಲು ಈ ತಿಂಗಳ 18 ರಂದು ಸರ್ವಪಕ್ಷ ಸಭೆ ಕರೆಯುವುದಾಗಿ ಮುಖ್ಯ ಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಇಂದು ಬಸವಕಲ್ಯಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮುಖಗವಸುಗಳನ್ನು ಧರಿಸಿ ಸಾಮಾಜಿಕ ದೂರವನ್ನು ಕಾಪಾಡಿಕೊಳ್ಳುವ ಮೂಲ ಕ ಎರಡನೇ ಹಂತದಲ್ಲಿ ಸೋಂಕು ಉಲ್ಬಣವನ್ನು ನಿಯಂತ್ರಿಸುವಲ್ಲಿ ಜನರು ಸರ್ಕಾರದೊಂದಿಗೆ ಸಹಕ ರಿಸಬೇಕು.ಇಲ್ಲವಾದಲ್ಲಿ ಕಠಿಣ ನಿರ್ಧಾರ ತೆಗೆದುಕೊ ಳ್ಳಬೇಕಾಗುತ್ತದೆ ಎಂದು ಸಿಎಂ ಹೇಳಿದರು

ಸದ್ಯ ಲಾಕ್‌ಡೌನ್ ಹೇರುವ ಪ್ರಸ್ತಾಪವಿಲ್ಲ. ಆದರೆ, ಮೇ 2 ರ ವೇಳೆಗೆ ಕೋವಿಡ್ ಎರಡನೇ ಅಲೆಯ ಪಾಸಿಟೀವ್ ಪ್ರಕರಣಗಳು ಉತ್ತುಂಗಕ್ಕೇರಬಹುದು ಎಂದು ತಜ್ಞರ ಸಮಿತಿ ವರದಿ ನೀಡಿದೆ ಹೀಗಾಗಿ ಎಲ್ಲಾ ವಿಚಾರಗಳ ಕುರಿತು ಚರ್ಚಿಸಲು ಈ ಒಂದು ಸರ್ವ ಪಕ್ಷಗಳ ಸಭೆಯನ್ನು ಕರೆದಿರುವುದಾಗಿ ಹೇಳಿ ದರು

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.