ಬೆಂಗಳೂರು –
ನಾಳೆ ಮಧ್ಯಾಹ್ನ 2 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ.ಮಹತ್ವದ ವಿಚಾರಗಳು ಚರ್ಚೆಯಾಗಲಿದೆ.

ಸದ್ಯ, ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ವೈರಲ್ ಪ್ರಕರಣ ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಇನ್ನೂ, ಸಿಡಿ ವೈರಲ್ ಆಗುತ್ತಿದ್ದಂತೆ ರಮೇಶ್ ಜಾರಕಿಹೊಳಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗಿದ್ದು, ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಗೆ ರಮೇಶ್ ಜಾರಕಿಹೊಳಿ ಬರ್ತಾರಾ..? ಸಭೆಯಲ್ಲಿ ಸಿಡಿ ಸ್ಪೋಟ ವಿಚಾರಕ್ಕೆ ಸಂಬಂಧಿಸಿದಂತೆ ಯಾವೆಲ್ಲಾ ಚರ್ಚೆಯಾಗಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.