ಹಾಸನ –
2023ಕ್ಕೆ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸಿ ಅಧಿಕಾರ ಹಿಡಿಯೋದು ನಿಶ್ಚಿತ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಭವಿಷ್ಯ ನುಡಿದಿದ್ದಾರೆ.ಹಾಸನದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು ಎರಡು ರಾಷ್ಟ್ರೀಯ ಪಕ್ಷಗಳು ಜೆಡಿಎಸ್ ಪಕ್ಷ ಮುಗಿಸಲು ಹೊರಟಿವೆ ಅಲ್ಲದೆ ನಮ್ಮಪಕ್ಷದ ಅಭ್ಯರ್ಥಿಗಳನ್ನು ಸೆಳೆಯುವ ಮಟ್ಟಕ್ಕೆ ತಮ್ಮ ಅಸ್ತಿತ್ವ ಕಳೆದುಕೊಂಡಿವೆ ಎಂದರು
ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರ ಹಿಡಿ ಯುವುದನ್ನು ಯಾರೂ ತಪ್ಪಿಸಲು ಸಾಧ್ಯವಿಲ್ಲ ಎಂದರು. ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡರು ಇಷ್ಟು ವರ್ಷಗಳ ರಾಜಕೀಯ ಜೀವನದಲ್ಲಿ ಸಾಕಷ್ಟು ಏಳು ಬೀಳುಗಳನ್ನು ಕಂಡಿದ್ದಾರೆ. ಪಕ್ಷಕ್ಕೆ ಮೇಲೇಳುವ ಶಕ್ತಿ ಇದೆ ಎಂದು ನುಡಿದರು.