ಬೆಂಗಳೂರು –
ಹಿಜಾಬ್ ವಿಚಾರ ಕುರಿತಂತೆ ತೀರ್ಪನ್ನು ನೀಡಿದ್ದ ನ್ಯಾಯಮೂರ್ತಿಗಳಿಗೆ ಬೆದರಿಕೆ ಹಾಕಿದವರನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ.ಹೌದು ತೀರ್ಪನ್ನು ನೀಡಿದ್ದ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿಗಳಿಗೆ ಅಪರಿಚಿ ತರು ಜೀವ ಬೆದರಿಕೆ ಹಾಕಿದ್ದರು.ಇದು ದೇಶದೆಲ್ಲೆಡೆ ತೀವ್ರ ಆತಂಕಕ್ಕೆ ಕಾರಣವಾಗಿತ್ತು.ಅಪರಿಚಿತ ವ್ಯಕ್ತಿಗಳು ವಾಟ್ಸಾಫ್ ವೀಡಿಯೋದಲ್ಲಿ ನ್ಯಾಯಮೂರ್ತಿಗಳನ್ನು ನಿಂದಿಸಿ ಜೀವ ಬೆದರಿಕೆ ಹಾಕಿದ್ದರು.ಈ ಕುರಿತು ನ್ಯಾಯ ವಾದಿ ಸುಧಾಕಾಟ್ವಾ ಎಂಬುವರು ಬೆಂಗಳೂರಿನ ವಿಧಾನ ಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು.ಇದನ್ನು ರಾಜ್ಯ ಸರ್ಕಾರ ಸಹ ಗಂಭೀರವಾಗಿ ಪರಿಗಣಿಸಿತ್ತು ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಜೀವ ಬೆದರಿಕೆ ಎದು ರಾಗಿರುವ ಹಿನ್ನೆಲೆಯಲ್ಲಿ ಅವರಿಗೆ ʼವೈʼ ಭದ್ರತೆ ಶ್ರೇಣಿಯ ರಾಜ್ಯ ಸರ್ಕಾರ ನೀಡಿತ್ತು.ಇದೀಗ ಬೆದರಿಕೆ ಹಾಕಿದ್ದ ಇಬ್ಬರ ನ್ನು ಪೊಲೀಸರು ಬಂಧಿಸಿದ್ದಾರೆ.

ಹೈಕೋರ್ಟ್ ನೀಡಿದ ತೀರ್ಪಿನಲ್ಲಿ ಏನಿದೆ……..
ತೀವ್ರ ವಿವಾದಕ್ಕೆ ಕಾರಣವಾಗಿದ್ದ ಹಿಜಾಬ್ ಕುರಿತಂತೆ ಹೈಕೋರ್ಟ್ ತೀರ್ಪು ಪ್ರಕಟಿಸಿದ್ದು.ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ ಎಂದು ಹೈಕೋರ್ಟ್ ಪೂರ್ಣ ಪೀಠ ಮಹತ್ವದ ತೀರ್ಪು ನೀಡಿತ್ತು. ಕುರಾನ್ನಲ್ಲಿ ಹಿಜಾಬ್ ಧರಿಸುವುದು ಕಡ್ಡಾಯಪಡಿಸಿಲ್ಲ ಎಂದು ಹೈಕೋರ್ಟ್ ಪೂರ್ಣ ಪೀಠದ ತೀರ್ಪಿನಲ್ಲಿ ಉಲ್ಲೇಖ ಮಾಡಲಾಗಿತ್ತು. ಹಿಜಾಬ್ ಬಗ್ಗೆ ಕುರಾನ್ನಲ್ಲಿ ಯಾವುದೇ ಪ್ರಸ್ತಾಪವಿಲ್ಲ ಅಂತ ಹೈಕೋರ್ಟ್ ಹೇಳಿತ್ತು. ಹಿಜಾಬ್ ಧರಿಸುವುದು ಇಸ್ಲಾಂನ ಅವಿಭಾಜ್ಯ ಅಂಗವಲ್ಲ ಎಂದು ಹೇಳಿ ತೀರ್ಪು ಪ್ರಕಟಿಸಿತ್ತು.
ಯಾರಿಗೆ ಬಂದಿತ್ತು ಜೀವ ಬೆದರಿಕೆ?
ಕಳೆದ ವಾರವಷ್ಟೇ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ, ನ್ಯಾಯಮೂರ್ತಿಗ ಳಾದ ಕೃಷ್ಣ ಎಸ್. ದೀಕ್ಷಿತ್ ಮತ್ತು ಖಾಜಿ ಜೈಬುನ್ನೆಸಾ ಮೊಹಿಯುದ್ದೀನ್ ಅವರನ್ನೊಳಗೊಂಡ ವಿಶೇಷ ಪೀಠ ಹಿಜಾಬ್ ವಿವಾದ ಕುರಿತಂತೆ ತೀರ್ಪು ನೀಡಿದ್ದರು. ಇದೇ ಕಾರಣಕ್ಕೆ ಅಪರಿಚಿತರು ಹೈಕೋರ್ಟ್ ನ್ಯಾಯಮೂರ್ತಿ ಗಳಿಗೆ ಜೀವ ಬೆದರಿಕೆ ಹಾಕಿದ್ದರು.


ನ್ಯಾಯಮೂರ್ತಿಗಳಿಗೆ ಜೀವ ಬೆದರಿಕೆ ಹಾಕಿದ್ದ ಅಪರಿಚಿತರು
ಅಪರಿಚಿತರು ವಾಟ್ಸಾಪ್ ವಿಡಿಯೋದಲ್ಲಿ ತಮಿಳು ಭಾಷೆಯಲ್ಲಿ ಬೆದರಿಕೆ ಹಾಕಿದ್ದರು. ಸುಮಾರು 4 ನಿಮಿಷ ಇರೋ ಒಂದು ವಿಡಿಯೋವನ್ನು ವಾಟ್ಸಪ್ ಗೆ ಕಳುಹಿಸಿದ್ದು, ಅದು ತಮಿಳು ಭಾಷೆಯಲ್ಲಿತ್ತು. ಆ ವಿಡಿಯೋದಲ್ಲಿ ಹಿಜಾಬ್ ಹೈಕೋರ್ಟ್ ತೀರ್ಪಿಗೆ ಸಂಬಂಧಿಸಿದಂತೆ ಮಾನ್ಯ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಿಗೆ ಕೊಲೆ ಬೆದರಿಕೆ ಹಾಕಿದ್ದರು.
ಅಪರಿಚಿತ ವ್ಯಕ್ತಿಗಳ ವಿರುದ್ಧ ದೂರು
ನ್ಯಾಯಮೂರ್ತಿಗಳಿಗೆ ಜೀವ ಬೆದರಿಕೆ ಹಾಕಿದ ಕುರಿತಂತೆ ವಕೀಲೆ ಸುಧಾಕಾಟ್ವ ಎಂಬವರು ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ಸಂಬಂಧ ಐಪಿಸಿ ಸೆಕ್ಷನ್ 506(ಬೆದರಿಕೆ), 501(1)(ಮಾನಹಾನಿ), 503(ಕ್ರಿಮಿನಲ್ ಬೆದರಿಕೆ), 109(ಪ್ರಚೋದನೆ), 504(ಶಾಂತಿ ಭಂಗ), 505(ಸಾರ್ವಜನಿಕ ಕಿಡಿಗೇಡಿತನ) ಸೇರಿದಂತೆ ವಿವಿಧ ಸೆಕ್ಷನ್‌ಗಳಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು.
ತಮಿಳುನಾಡಿನಲ್ಲಿ ಇಬ್ಬರು ಆರೋಪಿಗಳು ಅರೆಸ್ಟ್
ಈ ಬಗ್ಗೆ ದೂರು ಪಡೆದ ಪೊಲೀಸರು, ತಮಿಳುನಾಡಿನಲ್ಲಿ ಇಬ್ಬರನ್ನು ಬಂಧಿಸಿದ್ದಾರೆ. ಬಂದಿತರನ್ನು ಕೋವೈ ರಹಮತುಲ್ಲಾ ಹಾಗೂ ಎಸ್. ದಮಾಲ್ ಮೊಹಮ್ಮದ್ ಉಸ್ಮಾನಿ ಎಂಬುವರನ್ನು ಬಂಧಿಸಲಾಗಿದೆ. ಕೋವೈ ರಹಮತುಲ್ಲಾನನ್ನು ತಿರುನಲ್ವೇಲಿಯಿಂದ ಬಂಧಿಸಿದರೆ, ಎಸ್. ಜಮಾಲ್ ಮೊಹಮ್ಮದ್ ಉಸ್ಮಾನಿಯನ್ನು ತಂಜಾವೂರಿನಿಂದ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.
ಬಂಧಿತ ಆರೋಪಿಗಳ ಹಿನ್ನೆಲೆ ಏನು?
ಇಬ್ಬರೂ ಆರೋಪಿಗಳು ಇಸ್ಲಾಮಿಕ್ ಧಾರ್ಮಿಕ ಸಂಘಟನೆಯಾದ ತಮಿಳುನಾಡು ತೌಹೀದ್ ಜಮಾತ್ (ಟಿಎನ್‌ಟಿಜೆ) ಸದಸ್ಯರಾಗಿದ್ದಾರೆ. ಇದೀಗ ಬಂಧಿತರ ವಿಚಾರಣೆ ನಡೆಯುತ್ತಿದ್ದು ಸಧ್ಯ ಇಬ್ಬರನ್ನು ವಶಕ್ಕೆ ತಗೆದುಕೊಂಡಿರುವ ವಿಧಾನ ಸೌಧ ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದು ಸಮಗ್ರವಾಗಿ ವಿಚಾರಣೆಯನ್ನು ಮಾಡ್ತಾ ಇದ್ದಾರೆ.