ಬಾಗಲಕೋಟೆ –
ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಾಯಕ ಆಡಳಿತಾಧಿಕಾರಿ ರಾಜಶ್ರೀ ಪೋಳ ಲಂಚ ಪಡೆಯುವ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದಿದ್ದಾರೆ.
ರಾಘವೇಂದ್ರ ಮಡಿವಾಳ ಎಂಬವರು ನೀಡಿದ ದೂರಿನ ಅನ್ವಯ ಲೋಕಾಯುಕ್ತ ಡಿವೈಎಸ್ಪಿ ಸಿದ್ದೇಶ್ವರ ನೇತೃತ್ವದಲ್ಲಿ ನಡೆದ ದಾಳಿ ನಡೆಸಲಾ ಗಿತ್ತು.ಬಾಗಲಕೋಟೆ ಜಿಲ್ಲಾಡಳಿತ ಭವನದಲ್ಲಿ ರುವ ಕಚೇರಿಯಲ್ಲಿ ಕಾರ್ಯಾಚರಣೆ ನಡೆಸಲಾ ಗಿದೆ. ಬಾಗಲಕೋಟೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ರಾಜಶ್ರೀ ಪೋಳ ಅವರು ಸಿಬ್ಬಂದಿಯನ್ನು ಕರ್ತವ್ಯಕ್ಕೆ ಸೇರಿಸಿಕೊಳ್ಳಲು ಲಂಚದ ಬೇಡಿಕೆ ಇಟ್ಟಿದ್ದರಂತೆ.
5 ಸಾವಿರ ರೂಪಾಯಿ ಲಂಚದ ಹಣ ಪಡೆಯುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಬಾಗಲಕೋಟ…..