ಬೆಳಗಾವಿ –
ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಹಲವು ತಿಂಗಳುಗಳಿಂದ ಬಾಗಿಲು ಮುಚ್ಚಿದ್ದ ಉತ್ತರ ಕರ್ನಾಟಕದ ಆರಾಧ್ಯ ದೇವತೆ ಏಳುಕೊಳ್ಳದ ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಿಯ ದರ್ಶನ ಭಾಗ್ಯ ಸೆಪ್ಟೆಂಬರ್ 28 ರಿಂದ ಸಿಗಲಿದೆ. ಬಹುನಿರೀಕ್ಷಿತ ಶ್ರೀ ಯಲ್ಲಮ್ಮ ದೇವಸ್ಥಾನದ ಬಾಗಿಲು ತೆರೆಯಲು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಹಸಿರು ನಿಶಾನೆ ನೀಡಿದ್ದಾರೆ ಕೋವಿಡ್ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಭಕ್ತರು ದರ್ಶನ ಪಡೆಯಲು ಡಿಸಿ ಸೂಚನೆ ನೀಡಿದ್ದಾರೆ.
ದೇವಾಲಯದಲ್ಲಿ ಜನಸಂದಣಿ ಸೇರುವಂತಹ ಎಲ್ಲ ಸೇವೆ,ಜಾತ್ರೆ,ವಿಶೇಷ ಉತ್ಸವ ಕಾರ್ಯಕ್ರಮಗಳನ್ನು ನಿರ್ಬಂಧಿಸಲಾಗಿದೆ.ಭಕ್ತರು ಸರಾಗವಾಗಿ ಸರದಿ ಸಾಲಿನಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡು ದರ್ಶನ ಪಡೆದುಕೊಳ್ಳಬೇಕು.ದೇವಸ್ಥಾನದ ಆವರಣದಲ್ಲಿ ಕಡ್ಡಾಯವಾಗಿ ಮಾಸ್ಕ್,ಥರ್ಮಲ್ ಸ್ಕ್ಯಾನಿಂಗ್, ಸ್ಯಾನಿಟೈಸರ್ ವ್ಯವಸ್ಥೆ ಮಾಡಿಕೊಳ್ಳ ಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿ ಆದೇಶಿಸಿದ್ದಾರೆ.