ವಿಜಯಪುರ –
ರಾಜ್ಯ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಹಣ ಹಾಗೂ ಸಿಡಿ ಇಟ್ಟುಕೊಂಡು ಯಡಿಯೂರಪ್ಪ ಅವರನ್ನು ಬ್ಲಾಕ್ ಮೇಲ್ ಮಾಡಿದ್ದಾರೆ ಎಂದರು.

ಇಂದು ಸಚಿವರಾಗುತ್ತಿರುವ ವ್ಯಕ್ತಿಯೊಬ್ಬರು ಸಿಡಿ ಇಟ್ಟುಕೊಂಡು ಬಿಎಸ್ ವೈ ಅವರನ್ನು ಬ್ಲಾಕ್ ಮೇಲ್ ಮಾಡಿದ್ದಾರೆ.ಸಚಿವರಾಗುತ್ತಿರುವ ಇಬ್ಬರಲ್ಲಿ ಓರ್ವ ರಾಜಕೀಯ ಕಾರ್ಯದರ್ಶಿ ಸಿಎಂ ಯಡಿಯೂರಪ್ಪ ಅವರನ್ನು ಇಡಿ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡಿದ್ದಾರೆಂದರು.

ಮೂವರು ನಾಯಕರು ಸೇರಿ ಕೆಲ ತಿಂಗಳ ಹಿಂದೆ ನನ್ನನ್ನು ಭೇಟಿ ಮಾಡಿದ್ದರು.ನೆಲಮಂಗಲದ ರೇರ್ಸಾಟ್ ಬಳಿ ನನ್ನನ್ನು ಭೇಟಿ ಮಾಡಿದ್ದರು.ಸಿಎಂ ಯಡಿಯೂರಪ್ಪ ಪದಚ್ಯುತಿ ಮಾಡಲು ಈ ಮೂವರು ನಾಯಕರನ್ನು ನನ್ನನ್ನು ಭೇಟಿ ಮಾಡಿ ಕೋಟಿ ಕೋಟಿ ಹಣ ಖರ್ಚು ಮಾಡಿ ಯಡಿಯೂರಪ್ಪ ಕೆಳಗಿಳಿಸಲು ಮುಂದಾಗಿದ್ದರು. ಯಡಿಯೂರಪ್ಪ ಅವರಿಗೆ ಬ್ಲಾಕ್ ಮೇಲ್ ಮಾಡಿ ಇಂದು ಇಬ್ಬರು ಸಚಿವರಾಗುತ್ತಿದ್ದಾರೆ. ಓರ್ವ ರಾಜಕೀಯ ಕಾರ್ಯದರ್ಶಿಯಾಗಿದ್ದಾರೆಂದರು ಹಣ ನೀಡಿದವರಿಗೆ, ಬ್ಲಾಕ್ ಮೇಲ್ ಮಾಡಿದವರಿಗೆ ಸಚಿವ ಸ್ಥಾನ ಸಿಕ್ಕಿದೆ. ಕೆಲವರು ಸಿಡಿ ತೋರಿಸಿ ಯಡಿಯೂರಪ್ಪರನ್ನ ಹೆದರಿಸಿ ಸಚಿವರಾಗಿದ್ದಾರೆ. ಇನ್ನು ಕೆಲವರು ಅಪಾರ ಪ್ರಮಾಣದ ಹಣ ನೀಡಿ ಸಚಿವರಾಗಿದ್ದಾರೆಂದರು.
ಸಮಸ್ತ ಲಿಂಗಾಯತ ವೀರಶೈವ ಸಮಾಜದ ಮರ್ಯಾದೆಯನ್ನ ಸಿಎಂ ಯಡಿಯೂರಪ್ಪ ತೆಗೆದಿದ್ದಾರೆ.ಸಿಎಂ ಅವರಿಗೆ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಹೊರಬರಲಿ ಎಂದು ಸವಾಲು. ವೀರಶೈವ ಲಿಂಗಾಯತ ಮಠಗಳಿಗೆ ಹಣ ನೀಡಿ ನನ್ನ ಕೆಳಗಿಳಿಸಿದರೆ ಕೇಂದ್ರದ ವಿರುದ್ಧ ಬಂಡೇಳುವಂತೆ ಯಡಿಯೂರಪ್ಪ ಯೋಜನೆ ಮಾಡಿದ್ದಾರೆ. ಸಂಕ್ರಮಣದ ಉತ್ತರಾಯಣದ ಮೂಲಕ ಸಿಎಂ ಯಡಿಯೂರಪ್ಪ ಅದಃ ಪತನ ಆರಂಭವಾಗಿದೆ ಎನ್ನುತ್ತಾ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು.