ಹುಬ್ಬಳ್ಳಿ –
ಸದಾ ಒಂದಿಲ್ಲೊಂದು ರೀತಿಯಲ್ಲಿ ವಿಶೇಷ ಕಾರ್ಯ ಗಳ ಮೂಲಕ ಸಮಾಜ ಸೇವೆಯನ್ನು ಮಾಡುತ್ತಿರುವ ಹುಬ್ಬಳ್ಳಿಯ VAK ಫೌಂಡೇಶನ್ ಅಧ್ಯಕ್ಷ ವೆಂಕಟೇಶ ಕಾಟವೆ ಅವರ ಹುಟ್ಟು ಹಬ್ಬದ ಹಿನ್ನೆಲೆ ಯಲ್ಲಿ ಮತ್ತೆ ಹತ್ತಾರು ವಿಶೇಷ ಕಾರ್ಯಕ್ರಮ ಗಳನ್ನು ಆಯೋಜನೆ ಮಾಡಲಾಗಿದೆ ಹೌದು
ವೆಂಕಟೇಶ ಕಾಟವೆ ಜನ್ಮದಿನದ ಅಂಗವಾಗಿ ಆರೋಗ್ಯ ತಪಾಸಣೆ ಶಿಬಿರವನ್ನು ಜುಲೈ 29 ರಂದು ಹುಬ್ಬಳ್ಳಿಯಲ್ಲಿ ಆಯೋಜನೆ ಮಾಡಲಾಗಿದೆ 40ನೇ ಜನ್ಮದಿನದ ಅಂಗವಾಗಿ ವೆಂಕಟೇಶ ಅಶೋಕ ಕಾಟವೆ ಫೌಂಡೇಶನ್, ಕೆಎಲ್‌ಇ ಆಸ್ಪತ್ರೆ ಹಾಗೂ ರಾಷ್ಟ್ರೋತ್ಥಾನ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ನಗರದ ದಾಜಿಬಾನಪೇಟೆಯ ದುರ್ಗಾದೇವಿ ಕಲ್ಯಾಣ ಮಂಟಪ ದಲ್ಲಿ ಜುಲೈ 29ರಂದು ಬೆಳಿಗ್ಗೆ 9ಗಂಟೆ ಯಿಂದ ಸಂಜೆ 5 ಗಂಟೆ ವರೆಗೆ ಆರೋಗ್ಯ ಉಚಿತ ತಪಾಸಣೆ ಹಾಗೂ ರಕ್ತದಾನ ಶಿಬಿರ ಆಯೋಜಿಸಲಾಗಿದೆ’

ಎಂದು ರಾಷ್ಟ್ರೋತ್ಥಾನ ರಕ್ತನಿಧಿ ಕೇಂದ್ರದ ಮುಖ್ಯಸ್ಥ ದತ್ತ ಮೂರ್ತಿ ಕುಲಕರ್ಣಿ ಮತ್ತು VAK ಫೌಂಡೇಶನ್ ಅಧ್ಯಕ್ಷ ವೆಂಕಟೇಶ ಕಾಟವೆ ಹೇಳಿದರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಆಧಾರ್ ಕಾರ್ಡ್ ಇರುವವರು ಶಿಬಿರ ದಲ್ಲಿ ಪಾಲ್ಗೊಂಡು ಪ್ರಯೋಜನ ಪಡೆಯಬಹುದು. ಒಂದು ಸಾವಿರಕ್ಕೂ ಹೆಚ್ಚು ಜನ ರಕ್ತದಾನ ಮಾಡಲಿದ್ದು, ಈಗಾಗಲೇ 100 ಮಂದಿ ನೋಂದಣಿ ಮಾಡಿಸಿದ್ದಾರೆ’ ಎಂದರು.

ವಿಎಕೆ ಫೌಂಡೇಶನ್ ಅಧ್ಯಕ್ಷವೆಂಕಟೇಶ ಕಾಟವೆ ಮಾತನಾಡಿ ಹುಬ್ಬಳ್ಳಿಯ ಮೂರು ಸಾವಿರ ಮಠದ ಗುರುಸಿದ್ಧ ರಾಜಯೋ ಗೀಂದ್ರ ಸ್ವಾಮೀಜಿ ಹಾಗೂ ನೊಣವಿನಕೆರೆ ಕಾಡಸಿದ್ಧೇಶ್ವರ ಮಠದ ಶಿವಯೋಗೀಶ್ವರ ಸ್ವಾಮೀಜಿ ಸಾನ್ನಿಧ್ಯ, ಮಾಜಿ ಶಾಸಕ ಅಶೋಕ ಕಾಟವೆ ಅಧ್ಯಕ್ಷತೆ ವಹಿಸುವರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಾರ್ಯಕ್ರಮ ಉದ್ಘಾಟಿಸುವರು. ಅತಿಥಿಗಳಾಗಿ ಶಾಸಕರಾದ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ, ರಾಜ್ಯಸಭಾ ಸದಸ್ಯರಾದ ನಾರಾಯಣಸಾ ಭಾಂಡಗೆ, ಎಂ .ನಾಗರಾಜ,

ವಿಧಾನ ಪರಿಷತ್ ಸದಸ್ಯರಾದ ಪ್ರದೀಪ ಶೆಟ್ಟರ್, ಲಿಂಗರಾಜ ಪಾಟೀಲ, ಕೆಎಲ್‌ಇ ಸಂಸ್ಥೆಯ ಶಂಕರಣ್ಣ ಮುನವಳ್ಳಿ, ಕ್ಷಮತಾ ಸೇವಾ ಸಂಸ್ಥೆ ಅಧ್ಯಕ್ಷ ಗೋವಿಂದ ಜೋಶಿ ಭಾಗವಹಿಸುವರು. ಕಾರ್ಯಕ್ರಮ ಅಂಗವಾಗಿ ಯೋಧರು, ವಿವಿಧ ಕ್ಷೇತ್ರಗಳ ಸಾಧಕರು ಹಾಗೂ ಪೌರಕಾರ್ಮಿಕರನ್ನು ಸನ್ಮಾನಿಸಲಾಗುವುದು’ ಎಂದು ತಿಳಿಸಿದರು.ಕೆಎಲ್‌ಇ ಆಸ್ಪತ್ರೆಯ ಮಾರ್ಕೆಟಿಂಗ್ ಅಧಿಕಾರಿ ರವಿ ಕುರಟ್ಟಿ, ಭಾಸ್ಕರ್ ಜಿತೂರಿ ಸೇರಿದಂತೆ ಹಲವರು ಈ ಒಂದು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..


