ಕಾರವಾರ –
ಕಾರವಾರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ಪ್ರಿಯಾಂಗಾ ಎಂ ಅವರು ಜಿಲ್ಲೆಯ ಅಮದಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಗೆ ಭೇಟಿ ನೀಡಿದರು. ಇದೇ ವೇಳೆ ಶಾಲೆಯಲ್ಲಿರುವ ವ್ಯವಸ್ಥೆಗಳನ್ನು ಪರೀಶಿಲಿಸಿದರು.ಮಕ್ಕಳ ಕಲಿಕಾ ಚಟುವಟಿಕೆ ವೀಕ್ಷಣೆ ಮಾಡಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು ಹಾಗೇ ಇದಕ್ಕೆ ಕಾರಣರಾದ ಶಾಲೆಯ ಶಿಕ್ಷಕರ ಕಾರ್ಯಕ್ಕೆ ಸಂತೋಷ ಪಟ್ಟು ಮತ್ತಷ್ಟು ಪ್ರೇರಣೆ ನೀಡಿದರು. ಹಾಗೆ ಶಾಲೆಯಲ್ಲಿ ರುವ ಮೂಲಭೂತ ಸೌಕರ್ಯಗಳನ್ನು ವೀಕ್ಷಿಸಿದ ಅವರು ಅಕ್ಷರ ದಾಸೋಹ ಕೊಠಡಿಗೆ ಭೇಟಿ ನೀಡಿ ಆಹಾರ ಧಾನ್ಯ. ಗಳ ಸಂಗ್ರಹ ವ್ಯವಸ್ಥೆ ವೀಕ್ಷಿಸಿ ಆಹಾರ ಧಾನ್ಯಗಳ ಗುಣ ಮಟ್ಟದ ಪರೀಕ್ಷೆ ನಡೆಸಿದರು.

ಈ ಸಂದರ್ಭದಲ್ಲಿ ಮಕ್ಕಳ ಶಿಕ್ಷಣ ಮತ್ತು ಮೂಲಭೂತ ಸೌಕರ್ಯಗಳ ಕುರಿತು ಶಾಲೆಯ ಮುಖ್ಯ ಶಿಕ್ಷಕ ಮತ್ತು ಸಹ ಶಿಕ್ಷಕರೊಂದಿಗೆ ಚರ್ಚೆ ನಡೆಸಿದ ಅವರು ವಿದ್ಯಾರ್ಥಿಗಳ ಹಾಜರಾತಿ ಶೈಕ್ಷಣಿಕ ಪ್ರಗತಿ ಕುರಿತು ಮಾಹಿತಿ ಪಡೆದುಕೊಂ ಡರು.ಹಾಗೆ ತರಗತಿಗಳಿಗೆ ಭೇಟಿ ನೀಡಿದ ಅವರು ವಿದ್ಯಾ ರ್ಥಿಗಳೊಂದಿಗೆ ಚರ್ಚೆ ನಡೆಸಿ ಪಠ್ಯ ಚಟುವಟಿಕೆಗಳನ್ನು ಪರಿಶೀಲಿಸಿದರು.ಬೆನ್ನು ತಟ್ಟಿದರು ಈ ಒಂದು ಸಮಯ ದಲ್ಲಿ ಕಾರವಾರ ಕ್ಷೇತ್ರ ಶಿಕ್ಷಣಾಧಿಕಾರಿ,ಅಮದಳ್ಳಿ ಪಂಚಾ ಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತ ರಿದ್ದರು